ನವದೆಹಲಿ: ಪತ್ರಕರ್ತೆ ಗೌರಿ ಲಂಕೇಶ್ ಶೂಟೌಟ್ ಹತ್ಯೆ ಪ್ರಕರಣದ ಆರೋಪಿಗಳ ವಿರುದ್ಧ KCOCA ಕಾಯ್ದೆ ಪುರಸ್ಕರಿಸಿರುವ ಸುಪ್ರೀಂ ಸೆಪ್ಟೆಂಬರ್ ಎಂಟರಂದು ವಿಚಾರಣೆಗೆ ನಿರ್ಧರಿಸಿದೆ.

ಸದರಿ ಕಾಯ್ದೆಯನ್ನು ಏಪ್ರಿಲ್ ೨೩ರಂದು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಗೌರಿ ಸಹೋದರಿ ಕವಿತಾ ಲಂಕೇಶ್ ಸುಪ್ರೀಂಕೋರ್ಟ್ ನಲ್ಲಿ ವಿಶೇಷ ಅರ್ಜಿ ಸಲ್ಲಿಸಿದ್ದರು.  ಪ್ರಭಾವಕ್ಕೆ ಒಳಗಾಗದೆ ಜಾಮೀನು ಅರ್ಜಿ ಇತ್ಯರ್ಥಗೊಳಿಸಲು ಸುಪ್ರೀಂ ಸೂಚಿಸಿದೆ.

ಗೌರಿ ಸಹೋದರಿ ಕವಿತಾ ಲಂಕೇಶ್ ಈ ಕ್ರಮವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. “ಗೌರಿ ಲಂಕೇಶ್ ಅವರ ಹತ್ಯೆ ಸಾಮಾನ್ಯ ಕೊಲೆ ಅಲ್ಲ. ಒಂದು ಸಂಘಟಿತ ಮತ್ತು ಸೈದ್ಧಾಂತಿಕ ದ್ವೇಷದ ಕಾರಣಕ್ಕೆ ನಡೆಸಲಾದ ಹತ್ಯೆ. ಕೋಕಾ ಕಾಯ್ದೆಯನ್ನು ಕೈಬಿಡುವುದರಿಂದ ಹತ್ಯೆಯ ಹಿಂದಿರುವ ಕಾಣದ ಕೈಗಳಿಗೆ ಶಿಕ್ಷೆಯಾಗುವುದಿಲ್ಲ” ಎಂದು ಕವಿತಾ ಲಂಕೇಶ್ ಅವರ ಪರವಾಗಿ ನ್ಯಾಯವಾದಿ ತೀಸ್ತಾ ಸೆತಲ್ವಾದ್‌ ಅವರು ಸುಪ್ರೀಂ ಕೋರ್ಟ್‌ನಲ್ಲಿ ವಾದಿಸಿದ್ದರು.

ಜುಲೈ 13 ರಂದು ಹೈಕೋರ್ಟ್‌ನ ಜಸ್ಟಿಸ್ ಹರೀಶ್ ಕುಮಾರ್‌ರವರ ಏಕ ಸದಸ್ಯ ಪೀಠ “ಎಸ್‌ಐಟಿ ಸಲ್ಲಿಸಿರುವ ಚಾರ್ಜ್ ಶೀಟ್‌ ಪ್ರಕಾರ ಜಾಮೀನು ನೀಡಲು ಸಾಧ್ಯವಿಲ್ಲ” ಎಂದು ಆದೇಶ ನೀಡಲಾಗಿತ್ತು.