ಚಿಕ್ಕಮಗಳೂರು: ದೇವನೂರು ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವು ಹಳೆಯ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವುದರಿಂದ ನೂತನ ಕಟ್ಟದ ನಿರ್ಮಾಣಕ್ಕೆ ಶಾಸಕ ಸಿ‌.ಟಿ. ರವಿ ಎರಡು ಕೋಟಿ ಅನುದಾನ ಮಂಜೂರು ಮಾಡಿದ್ದಾರೆ.

ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ದೇವನೂರು ಆಸ್ಪತ್ರೆಗೆ ಯೋಗ ಕೂಡಿ ಬಂದಿದ್ದು ಸದ್ಯದಲ್ಲೇ ಕಾಮಗಾರಿ ಟೆಂಡರ್ ಕರೆಯಲಾಗುತ್ತದೆ ಎಂದು ಸೂಚಿಸಲಾಗಿದೆ.

ಸಖರಾಯಪಟ್ಟಣ ಹೋಬಳಿಯಲ್ಲಿ ಸಖರಾಯಪಟ್ಟಣ ಆಸ್ಪತ್ರೆಯನ್ನು ಹೊರತುಪಡಿಸಿದರೆ ದೇವನೂರಿನ ಸರ್ಕಾರಿ ಆಸ್ಪತ್ರೆ ಯಲ್ಲಿ ಅತಿಹೆಚ್ಚು ಹೊರರೋಗಿಗಳು ಚಿಕತ್ಸೆ ಪಡೆಯುತ್ತಿರುವುದರಿಂದ ಶಾಸಕರು ಈ ಕ್ರಮಕ್ಕೆ ಮುಂದಾಗಿದ್ದಾರೆ.

ಇದೇ ಸಂದರ್ಭದಲ್ಲಿ ಸಖರಾಯಪಟ್ಟಣ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮಾದರಿ ಆರೋಗ್ಯ ಕೇಂದ್ರವನ್ನಾಗಿ ಪರಿವರ್ತಿಸಲು ಆಯ್ಕೆ ಮಾಡಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಶೀಘ್ರದಲ್ಲಿ ಕ್ರಮ ಜಾರಿಗೊಳಿಸಲಾಗುವುದು ಎಂದು ಸುದ್ದಿ ಮೂಲ ತಿಳಿಸಿದೆ.  ಸಖರಾಯಪಟ್ಟಣ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಚಿಕ್ಕಮಗಳೂರು ಮೆಡಿಕಲ್ ಕಾಲೇಜು ವ್ಯಾಪ್ತಿಗೆ ತರಲು  ಕ್ರಮ ಕೈಗೊಂಡಿದ್ದು  ತಜ್ಞ  ವೈದ್ಯರು ಲಭ್ಯವಿದ್ದು ೨೪/೭ ಸಮಯ ಚಿಕಿತ್ಸೆ ಲಬ್ಯವಾಗಲಿದೆ ಎಂದು ಶಾಸಕರು ತಿಳಿಸಿದ್ದಾರೆ.