ರಾಯಚೂರು ಜಿಲ್ಲೆಯಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಅಗತ್ಯವಿರುವ ತಾಂತ್ರಿಕ ಸಹಾಯಕರು ಹುದ್ದೆಗಳ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ಹೆಸರು:
ತಾಂತ್ರಿಕ ಸಹಾಯಕರು (ಸಿವಿಲ್), ತಾಂತ್ರಿಕ ಸಹಾಯಕರು (ತೋಟಗಾರಿಕೆ), ತಾಂತ್ರಿಕ ಸಹಾಯಕರು (ಅರಣ್ಯ), ತಾಂತ್ರಿಕ ಸಹಾಯಕರು (ಕೃಷಿ)

ಕರ್ತವ್ಯ ಸ್ಥಳ: ರಾಯಚೂರು ಜಿಲ್ಲೆ

ಖಾಲಿಯಿರುವ ಹುದ್ದೆಗಳ ಸಂಖ್ಯೆ: 11

ಹುದ್ದೆ
ಹುದ್ದೆಗಳ ಸಂಖ್ಯೆ
ತಾಂತ್ರಿಕ ಸಹಾಯಕರು (ಸಿವಿಲ್)
2
ತಾಂತ್ರಿಕ ಸಹಾಯಕರು (ತೋಟಗಾರಿಕೆ)
1
ತಾಂತ್ರಿಕ ಸಹಾಯಕರು (ಅರಣ್ಯ)
2
ತಾಂತ್ರಿಕ ಸಹಾಯಕರು (ಕೃಷಿ)
6

ಶೈಕ್ಷಣಿಕ ಅರ್ಹತೆ:
ತಾಂತ್ರಿಕ ಸಹಾಯಕರು (ಸಿವಿಲ್) – ಡಿಪ್ಲೊಮಾ ಸಿವಿಲ್/ ಬಿಇ/ ಬಿ.ಟೆಕ್ (ಸಿವಿಲ್). ಬಿಇ (ಸಿವಿಲ್) ಅಭ್ಯರ್ಥಿಗಳು ಬಂದಲ್ಲಿ ಡಿಪ್ಲೊಮಾ ಸಿವಿಲ್ ಅಭ್ಯರ್ಥಿಗಳನ್ನು ಪರಿಗಣಿಸುವುದಿಲ್ಲ.
ತಾಂತ್ರಿಕ ಸಹಾಯಕರು (ತೋಟಗಾರಿಕೆ) – ತೋಟಗಾರಿಕೆ ಪದವಿ ಮತ್ತು ಇತರ ತತ್ಸಮಾನ ಶೈಕ್ಷಣಿಕ ಅರ್ಹತೆ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ತಾಂತ್ರಿಕ ಸಹಾಯಕರು (ಅರಣ್ಯ) – ಅರಣ್ಯ ಪದವಿ ಮತ್ತು ಇತರ ತತ್ಸಮಾನ ಶೈಕ್ಷಣಿಕ ಅರ್ಹತೆ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ತಾಂತ್ರಿಕ ಸಹಾಯಕರು (ಕೃಷಿ) – ಕೃಷಿ ಪದವಿ ಮತ್ತು ಇತರ ತತ್ಸಮಾನ ಶೈಕ್ಷಣಿಕ ಅರ್ಹತೆ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ಇದನ್ನೂ ಓದಿ: ನೇಮಕಾತಿ 2022: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 1048 ಹುದ್ದೆಗಳು ಖಾಲಿ, ಕೂಡಲೇ ಅರ್ಜಿ ಸಲ್ಲಿಸಿ

ವಯೋಮಿತಿ: ಕನಿಷ್ಠ 21 ವರ್ಷ, ಗರಿಷ್ಠ 40 ವರ್ಷ

ವೇತನ:
ಮಾಸಿಕ ರೂ. 24,000 ಸಂಭಾವನೆ ಹಾಗೂ ಪ್ರಯಾಣ ಭತ್ಯೆ ರೂ. 2000 ನೀಡಲಾಗುವುದು.
ತಾಂತ್ರಿಕ ಸಹಾಯಕ ಸಿವಿಲ್ ಹುದ್ದೆಗೆ ಡಿಪ್ಲೊಮಾ ಅಭ್ಯರ್ಥಿಗಳಿಗೆ ರೂ. 22,000 ಸಂಭಾವನೆ ನೀಡಲಾಗುವುದು

ಆಯ್ಕೆ ವಿಧಾನ: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೂಲ ದಾಖಲೆಗಳ ಪರಿಶೀಲನೆ ನಡೆಸಿ, ದಾಖಲಾತಿ ಪರಿಶೀಲನೆಯಲ್ಲಿ ಅರ್ಹಗೊಂಡ ಅಭ್ಯರ್ಥಿಗಳನ್ನು ವಿದ್ಯಾರ್ಹತೆ ಹೊಂದಿದ ಅಂಕಗಳು ಹಾಗೂ ಪಡೆದ ಸೇವಾ ಅನುಭವದ ಆಧಾರದ ಮೇಲೆ ಅರ್ಹತಾ ಪಟ್ಟಿಯನ್ನು ತಯಾರಿಸಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುವುದು.

ಅನುಭವ: ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿಸಿದ ಕ್ಷೇತ್ರದಲ್ಲಿ ಕನಿಷ್ಠ 3 ವರ್ಷ ಅನುಭವ ಹೊಂದಿರಬೇಕು.

ಅರ್ಜಿ ಸಲ್ಲಿಕೆಯ ವಿಧಾನ:
ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು. ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಡಿಸೆಂಬರ್ 03, 2022
ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗಬೇಕಾದ ದಿನಾಂಕ: ಡಿಸೆಂಬರ್ 12, 2022
ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟಿಸುವ ದಿನಾಂಕ: ಡಿಸೆಂಬರ್ 15, 2022

ಹೆಚ್ಚಿನ ಮಾಹಿತಿಗೆ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ
https://ggle.io/5OKL

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://bityl.co/FrpX
11 vacancies in Zilla Panchayat