ಬೆಳಗಾವಿ: ರಾಜ್ಯದಲ್ಲಿ ಎರಡು ಲಕ್ಷ 53 ಸಾವಿರ ಸರ್ಕಾರಿ ಹುದ್ದೆಗಳು ಖಾಲಿ ಇದ್ದು, ಈ ವರ್ಷದಲ್ಲಿ ಒಂದು ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರು ಗುರುವಾರ ಹೇಳಿದ್ದಾರೆ.

ಇಂದು ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್‌ ಸದಸ್ಯ ಮಂಜೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಿಎಂ ಬೊಮ್ಮಾಯಿ, ರಾಜ್ಯದಲ್ಲಿ ಒಟ್ಟು 7.60 ಲಕ್ಷ ಹುದ್ದೆ ಮಂಜೂರಾಗಿದೆ. ಈ ಪೈಕಿ 5.11 ಲಕ್ಷ ಹುದ್ದೆ ಭರ್ತಿ ಮಾಡಲಾಗಿದೆ. ಇದರಲ್ಲಿ ಇನ್ನೂ 2.53 ಲಕ್ಷ ಹುದ್ದೆಗಳು ಖಾಲಿ ಇವೆ ಎಂದು ಮಾಹಿತಿ ನೀಡಿದರು.

ಸಿ ಮತ್ತು ಡಿ ಗ್ರೂಪ್ ಹುದ್ದೆಗಳನ್ನ ಗುತ್ತಿಗೆ ಆಧಾರದಲ್ಲಿ ತುಂಬಲು ಸೂಚನೆ ನೀಡಲಾಗಿದೆ.‌ ಸರ್ಕಾರಿ ಕೆಲಸಕ್ಕೆ ತೊಂದರೆ ಆಗದಂತೆ ಕ್ರಮವಹಿಸಲಾಗಿದೆ. ಎ ಮತ್ತು ಬಿ ಗ್ರೂಪ್ ಹುದ್ದೆಗಳನ್ನು ಇನ್ಚಾರ್ಜ್ ನೀಡಲಾಗಿದೆ. ಈ ವರ್ಷ 1 ಲಕ್ಷ ಸರ್ಕಾರಿ ಹುದ್ದೆ ತುಂಬಲು ಒಪ್ಪಿಗೆ ನೀಡಿದ್ದೇನೆ. ಆದ್ಯತೆಯ ಇಲಾಖೆಗಳಲ್ಲಿ ನೇಮಕಾತಿ ಪ್ರಕ್ರಿಯೆ ಮಾಡುತ್ತೇವೆ ಎಂದು ಸಿಎಂ ತಿಳಿಸಿದರು.

2 lakh 53 thousand government posts vacant