ಚಿಕ್ಕಮಗಳೂರು: ರಾಷ್ಟ್ರದ ಕ್ರಿಮಿನಲ್ ನ್ಯಾಯ ವ್ಯವಸ್ಥೆಯಲ್ಲಿ ವ್ಯಾಪಕ ಬದಲಾವಣೆ ರೂಪಿಸುವ ನಿಟ್ಟಿನಲ್ಲಿ ಹೊಸದಾಗಿ ಮೂರು ಕ್ರಿಮಿನಲ್ ಅಪರಾಧ ಕಾನೂನುಗಳನ್ನು ಇಂದಿನಿಂದ ಜಾರಿಗೊ ಳಿಸಲಾಗಿದೆ ಎಂದು ಹಿರಿಯ ವಕೀಲ ಎಸ್.ಹೆಚ್.ಮಹೇಶ್‌ಕುಮಾರ್ ಹೇಳಿದರು.

ನಗರದ ಜಿಲ್ಲಾ ನ್ಯಾಯಾಲಯದಲ್ಲಿ ಚಿಕ್ಕಮಗಳೂರು ವಕೀಲರ ಸಂಘದಿಂದ ಆಯೋಜಿಸಿ ಹೊಸ ಮೂರು ಕಾನೂನುಗಳ ತಿಳುವಳಿಕೆ ಮೂಡಿಸುವ ನಿಟ್ಟಿನಲ್ಲಿ ಕಾನೂನುಗಳ ಪರಿಚಯ ಕಾರ್ಯಕ್ರಮವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.

ಭಾರತೀಯ ದಂಡ ಸಂಹಿತೆ, ಹಿಂದಿನ ಅಪರಾಧ ದಂಡ ಪ್ರಕ್ರಿಯಾ ಸಂಹಿತೆ ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಯ ಬದಲಿಗೆ ಭಾರತೀಯ ನ್ಯಾಯ ಸಂಹಿತೆ ೨೦೨೩, ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ ಎಂಬ ಹೊಸದಾಗಿ ಅನುಷ್ಟಾನಗೊಳ್ಳುವ ಕಾಯ್ದೆಗಳಾಗಿವೆ ಎಂದು ತಿಳಿಸಿದರು.

ಜೀರೋ ಎಫ್‌ಐಆರ್, ಆನ್‌ಲೈನ್ ಮೂಲಕ ದೂರು ಸಲ್ಲಿಕೆಗೆ ಅವಕಾಶ, ಎಸ್‌ಎಂಎಸ್ ಮೂಲಕ ಸಮನ್ಸ್ ಕಳುಹಿಸುವುದು ಮತ್ತು ಹೇಯ ಅಪರಾಧ ನಡೆದಾದ ಆ ಸ್ಥಳದ ವೀಡೀಯೋ ಚಿತ್ರೀಕರಣವನ್ನು ಕಡ್ಡಾಯಗೊಳಿಸಿರುವ ನಿಬಂಧನೆಗಳನ್ನು ಹೊಸ ಕಾನೂನುಗಳು ಆಧುನಿಕ ನ್ಯಾಯವ್ಯವಸ್ಥೆಯನ್ನು ಜಾರಿಗೆ ತಂದಿದೆ ಎಂದು ವಿಶ್ಲೇಷಿಸಿದರು.

ವಕೀಲರ ಸಂಘದ ಅಧ್ಯಕ್ಷ ಡಿ.ಬಿ.ಸುಜೇಂದ್ರ ಮಾತನಾಡಿ ಇಂದಿನಿಂದ ದಾಖಲಾಗುವ ಪ್ರತಿಯೊ ಂದು ಪ್ರಕರಣಗಳು ಹೊಸ ಕಾನೂನಿನ ನಿಯಾಮನುಸಾರ ನಡೆಯಲಿದೆ. ಅಲ್ಲದೇ ನ್ಯಾಯಾಲಯದಲ್ಲಿ ಬಾಕಿ ಉಳಿದಿರುವ ಪ್ರಕರಣಗಳು ಮಾತ್ರ ಹಿಂದಿನ ಕಾನೂನು ನಿಯಮದಂತೆ ಪಾಲನೆಯಾಗಲಿದೆ ಎಂದರು.

ಪ್ರತಿಯೊಂದು ಎಫ್‌ಐಆರ್‌ಗಳನ್ನು ೧೫೪ನೇ ಸೆಕ್ಷನ್ ಬದಲಾಗಿ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆಯ ೧೭೩ನೇ ಸೆಕ್ಷನ್ ಅಡಿಯಲ್ಲಿ ದಾಖಲಿಸಿಕೊಳ್ಳಲಾಗುತ್ತಿದೆ. ಜೊತೆಗೆ ಹೊಸದಾಗಿ ರಚನೆಯಾ ಗಿರುವ ಕಾನೂನುಗಳಲ್ಲಿ ಲೋಪದೋಷಗಳು ಕಂಡುಬಂದಲ್ಲಿ ಸರಿಪಡಿಸಿಕೊಳ್ಳುವ ಕಾರ್ಯಕ್ಕೂ ಮುಂದಾ ಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಕೆ.ಎಸ್.ಶರತ್‌ಚಂದ್ರ, ಕಾರ್ಯದರ್ಶಿ ಆರ್.ಅನಿಲ್‌ಕುಮಾ ರ್, ಖಜಾಂಚಿ ಡಿ.ಬಿ.ದೀಪಕ್, ಸಹ ಕಾರ್ಯದರ್ಶಿ ಎನ್.ವಿ.ಪ್ರಿಯದರ್ಶಿನಿ ಮತ್ತಿತರರು ಹಾಜರಿದ್ದರು.

A sweeping change in the criminal justice system