ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ ಸಾವಿರಾರು ಅಡಿ ಪ್ರಪಾತಕ್ಕೆ ಟಿಪ್ಪರ್ ಲಾರಿ ಉರುಳಿ ಬಿದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ವ್ಯೂ ಪಾಯಿಂಟ್ ಬಳಿ ಶುಕ್ರವಾರ ಮಧ್ಯರಾತ್ರಿ ನಡೆದಿದೆ.

ಮೂಡಿಗೆರೆಯಿಂದ ಚಾರ್ಮಾಡಿಗೆ ಹೋಗುತ್ತಿದ್ದ ಟಿಪ್ಪರ್ ಲಾರಿ, ಮಂಜು ಕವಿದ ವಾತಾವರಣವಿದ್ದರಿಂದ ದಾರಿ ಕಾಣದೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಗುದ್ದಿ ಪ್ರಪಾತಕ್ಕೆ ಉರುಳಿ ಬಿದ್ದಿದೆ. ಉರುಳಿ ಬಿದ್ದ ರಭಸಕ್ಕೆ ಟಿಪ್ಪರ್ ಲಾರಿ ಸಂಪೂರ್ಣ ಛಿದ್ರ ಛಿದ್ರವಾಗಿದೆ.

ಚಾಲಕನಿಗೆ ಸೊಂಟಕ್ಕೆ ಪೆಟ್ಟಾದ ಕಾರಣ ಅಂಬುಲೆನ್ಸ್ ಮೂಲಕ ಉಜಿರೆಯ ಧರ್ಮಸ್ಥಳ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸ್ ಅಭಿಷೇಕ್, ಅರಣ್ಯ ಇಲಾಖೆ ಬೀಟ್ ಫಾರೆಸ್ಟ್ ಅಭಿಜಿತ್, ಸಮಾಜ ಸೇವಕ ಆರಿಫ್ ಹಾಗೂ ಕುಂಜಿಮೊಣು ಕಾರ್ಯಚರಣೆಯಲ್ಲಿ ಇದ್ದರು.

A tipper lorry fell into the abyss of Charmadi ghat