ಹಾಸನ: ಹಾಸನ ಜಿಲ್ಲೆಯಲ್ಲಿ ನಡೆದ 85 ವರ್ಷದ ಮಹಿಳೆಯ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ ಮತ್ತು ಅಪರಾಧಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಬಂಧಿತ ವ್ಯಕ್ತಿಯನ್ನು 32 ವರ್ಷದ ಮಿಥುನ್ ಕುಮಾರ್ ಎಂದು ಗುರುತಿಸಲಾಗಿದೆ. ಏಪ್ರಿಲ್ 2 ರಂದು ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಯರೇಹಳ್ಳಿ ಗ್ರಾಮದಲ್ಲಿ ಘಟನೆ ಬೆಳಕಿಗೆ ಬಂದಿದ್ದು, ಜಮೀನಿನಲ್ಲಿ ತಲೆ ಒಡೆದ ಸ್ಥಿತಿಯಲ್ಲಿ ವೃದ್ಧೆಯ ಬೆತ್ತಲೆ ಶವ ಪತ್ತೆಯಾಗಿತ್ತು.

ತನಿಖೆ ಕೈಗೆತ್ತಿಕೊಂಡ ಪೊಲೀಸರು ಐದು ವರ್ಷಗಳ ಹಿಂದೆ ವೃದ್ಧೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯ ಪಾತ್ರದ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದರು. ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಬಳಿಕ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ.

ಸಂತ್ರಸ್ತ ಮಹಿಳೆ, ತನ್ನ ಜಮೀನಿಗೆ ಹೋಗುತ್ತಿದ್ದಾಗ ಬೈಕ್‌ನಲ್ಲಿ ಬಂದ ಆರೋಪಿ ಆಕೆಯನ್ನು ಮಾತನಾಡಿಸಿದ್ದಾನೆ. ಆಕೆಯ ಜಮೀನಿನವರೆಗೆ ಲಿಫ್ಟ್ ಕೊಡಿಸುವುದಾಗಿ ಭರವಸೆ ನೀಡಿ ಬೈಕ್‌ನಲ್ಲಿ ಕರೆದುಕೊಂಡು ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಕೆಯನ್ನು ನಿರ್ಜನ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಆಕೆ ವಿರೋಧಿಸಿದಾಗ, ಆಕೆಯ ತಲೆಯನ್ನು ಬಂಡೆಯಿಂದ ಒಡೆದು ನಂತರ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳೆ ಮನೆಗೆ ಹಿಂತಿರುಗದಿದ್ದರಿಂದ ಆತಂಕಗೊಂಡ ಕುಟುಂಬಸ್ಥರು ಮರುದಿನ ಆಕೆಗಾಗಿ ಹುಡುಕಾಟ ನಡೆಸಿದಾಗ ಆಕೆಯ ಶವ ಪತ್ತೆಯಾಗಿದೆ. ಮುಂದಿನ ತನಿಖೆ ನಡೆಯುತ್ತಿದೆ.

Accused arrested for defrauding Rs 50 lakhs on the promise of employment