ಚಿಕ್ಕಮಗಳೂರು: ದಾಖಲೆ ಇಲ್ಲದೇ ಬಲೆನೋ ಕಾರಿನಲ್ಲಿ ಸಾಗಿಸುತ್ತಿದ್ದ ೧೮ ಚಿನ್ನದ ಉಂಗುರಗಳನ್ನು ವಸ್ತಾರೆ ಪೊಲೀಸ್ ಜಂಕ್ಷನ್ ನಲ್ಲಿ ವಶ ಪಡಿಸಿಕೊಳ್ಳಲಾಗಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವಾಹನ ತಡೆದು ರ್ಯಾಂಡಂ ತಪಾಸಣೆ ನಡೆಸುವ ವೇಳೆ ೯೦ ಗ್ರಾಂ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

ಲೋಕಸಭಾ ಚುನಾವಣೆ ಹಿನ್ನೆಲೆ ಜಿಲ್ಲೆಯ ಗಡಿಭಾಗಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಿರುವಂತೆ ಜಿಲ್ಲೆಯ ಆಂತರಿಕ ಭದ್ರತೆ ನಿಟ್ಟಿನಲ್ಲಿ ತಾಲೂಕ ತಾಲೂಕು ಮಧ್ಯೆ ಸಹಾ ಜಂಕ್ಷನ್ ಪಾಯಿಂಟ್ ಗಳನ್ನು ತೆರೆಯಲಾಗಿದ್ದು ಇಂದು ನಗರದ ಹೊರವಲಯದ ವಸ್ತಾರ ಗ್ರಾಮದ ಬಳಿ ದಾಖಲೆ ಇಲ್ಲದೇ ಬಲೆನೋ ವಾಹನದಲ್ಲಿ ಸಾಗಿಸುತ್ತಿದ್ದ ೯೦ ಗ್ರಾಂ ಮೌಲ್ಯದ ೧೮ ಚಿನ್ನದ ಉಂಗುರಗಳನ್ನು ವಶಕ್ಕೆ ಪಡೆಯಲಾಗಿದೆ.

ಚಿಕ್ಕಮಗಳೂರು ನಗರದ ವಿಜಯಪುರದ ಚಿನ್ನದ ವ್ಯಾಪಾರಿ ಒಬ್ಬರು ಗಟ್ಟಿ ಖರೀದಿಸಿ ಅದರಿಂದ ಉಂಗುರಗಳನ್ನು ತಯಾರಿಸಿ ಉಡುಪಿಯ ಜ್ಯುವೆಲರಿ ಅಂಗಡಿ ಮಾಲೀಕರಿಗೆ ಕೊಡಲು ತೆಗೆದುಕೊಂಡು ಹೋಗುವ ವೇಳೆ ತಪಾಸಣೆ ನಡೆಸಿದ ಪೊಲೀಸರು ಆಭರಣಗಳನ್ನು ವಶಕ್ಕೆ ಪಡೆದಿದ್ದಾರೆ.

An 18 gold ring carried in the Baleno car was seized