ಬೆಂಗಳೂರು: ಗಡಿ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಹೇಳಿಕೆ ಬಗ್ಗೆ ಸರ್ವಪಕ್ಷ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರು ಗುರುವಾರ ಹೇಳಿದ್ದಾರೆ.

ಇಂದು ಗೃಹ ಸಚಿವ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳೋಣ ಎಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಅವರು ಹೇಳಿರುವುದನ್ನು ಗಮನಿಸಿದ್ದೇನೆ. ಈ ಬಗ್ಗೆ ಮುಂದಿನ ವಾರ ಸರ್ವಪಕ್ಷ ಸಭೆ ಕರೆದು, ಚರ್ಚಿಸಿ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು.

ಮಹಾರಾಷ್ಟ್ರ ಸರ್ಕಾರವೇ ಸುಪ್ರೀಂ ಕೋರ್ಟ್​ನಲ್ಲಿ ದಾವೆ ಹೂಡಿದೆ. ನಾವು ವಾದ ಮಂಡನೆಗೆ ಸಮರ್ಥವಾಗಿ ತಯಾರಿ‌ ಮಾಡಿಕೊಂಡಿದ್ದೇವೆ. ಈ ಮಧ್ಯೆ ಮಾತುಕತೆ ನಡೆಸುವ ಕುರಿತು ಹೇಳಿಕೆ ಕೊಟ್ಟಿದ್ದಾರೆ. ಸುಪ್ರೀಂಕೋರ್ಟ್​​ನಲ್ಲಿ ವಾದ ಮಾಡುವ ಬಗ್ಗೆ ಈ‌ ಹಿಂದೆ ನಡೆದ ಸರ್ವಪಕ್ಷ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು ಎಂದು ಸಿಎಂ ಹೇಳಿದರು.

ಸದ್ಯ ನಮ್ಮ ಮುಂದೆ ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡಿಸುವ ಉದ್ದೇಶ ಇದೆ. ಆದರೆ ಮಾತುಕತೆ ಬಗ್ಗೆ ಮಹಾರಾಷ್ಟ್ರ ಸಿಎಂ ಶಿಂಧೆ ಹೇಳಿಕೆ ನೀಡಿದ್ದಾರೆ. ಈ ಮೂಲಕ ಗಡಿ ವಿಚಾರವೇ ಮುಗಿದು ಹೋಗಿದೆ. ಜತ್ ತಾಲೂಕು ಕರ್ನಾಟಕಕ್ಕೆ ಸೇರುವ ಬಗ್ಗೆ ತಾಲೂಕು ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳು ನಿರ್ಧರಿಸಿವೆ. ಇವೆಲ್ಲ ಸುಪ್ರೀಂಕೋರ್ಟ್ ಮುಂದೆ ವಾದ ಮಂಡನೆ ವೇಳೆ ಬರಲಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

An all-party meeting will be convened and the decision will be taken: