ನವದೆಹಲಿ: ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕಲ್ಪನೆಯು ಭಾರತೀಯ ಒಕ್ಕೂಟ ಮತ್ತು ಅದರ ಎಲ್ಲಾ ರಾಜ್ಯಗಳ ಮೇಲಿನ ದಾಳಿಯಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಆರೋಪಿಸಿದ್ದಾರೆ. ಭಾರತ, ರಾಜ್ಯಗಳ ಒಕ್ಕೂಟವಾಗಿದೆ’ ಎಂದು ಅವರು ಎಕ್ಸ್ ನಲ್ಲಿ ಫೋಸ್ಟ್ ಮಾಡಿದ್ದಾರೆ.

‘ಒಂದು ರಾಷ್ಟ್ರ, ಒಂದು ಚುನಾವಣೆ’ ಕಲ್ಪನೆಯು ಭಾರತೀಯ ಒಕ್ಕೂಟ ಮತ್ತು ಅದರ ಎಲ್ಲಾ ರಾಜ್ಯಗಳ ಮೇಲಿನ ದಾಳಿಯಾಗಿದೆ ಎಂದು ಅವರು ಟೀಕಿಸಿದ್ದಾರೆ.  ಏಕಕಾಲಕ್ಕೆ ಚುನಾವಣೆ ನಡೆಸುವ ಸಾಧ್ಯತೆಯ ಕುರಿತು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯನ್ನು ಸರ್ಕಾರ ರಚಿಸಿದ ನಂತರ ರಾಹುಲ್ ಗಾಂಧಿ ಈ ರೀತಿಯ ದಾಳಿ ಮಾಡಿದ್ದಾರೆ.

ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಸಮಿತಿಯ ಭಾಗವಾಗಲು ನಿರಾಕರಿಸಿದ್ದಾರೆ. ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಮಿತಿಯಿಂದ ಹೊರಗಿಟ್ಟಿರುವ ಬಗ್ಗೆಯೂ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಖರ್ಗೆ ಬದಲಿಗೆ ಪ್ರತಿಪಕ್ಷದ ಮಾಜಿ ನಾಯಕ ಗುಲಾಂ ನಬಿ ಆಜಾದ್ ಅವರನ್ನು ಸರ್ಕಾರ ಸಮಿತಿಗೆ ಸೇರಿಸಿದೆ.

ಲೋಕಸಭೆ, ರಾಜ್ಯ ವಿಧಾನಸಭೆಗಳು, ಪುರಸಭೆಗಳು ಮತ್ತು ಪಂಚಾಯತ್‌ಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ವಿಷಯದ ಬಗ್ಗೆ ಶೀಘ್ರವಾಗಿ ಪರಿಶೀಲಿಸಿ ಶಿಫಾರಸುಗಳನ್ನು ಮಾಡಲು ಎಂಟು ಸದಸ್ಯರ ಸಮಿತಿಗೆ ಸರ್ಕಾರ ಶನಿವಾರ ಅಧಿಸೂಚನೆ ಹೊರಡಿಸಿದೆ. ಸಮಿತಿಯು ಏಕಕಾಲದಲ್ಲಿ ಚುನಾವಣೆ  ನಡೆಸುವ ಉದ್ದೇಶಕ್ಕಾಗಿ ಅಗತ್ಯವಿರುವ ಸಂವಿಧಾನ ತಿದ್ದುಪಡಿ ಮತ್ತಿತರ ಯಾವುದೇ ಕಾನೂನುಗಳು ಮತ್ತು ನಿಯಮಗಳನ್ನು ಪರಿಶೀಲಿಸಿ, ಶಿಫಾರಸು ಮಾಡುತ್ತದೆ.

An attack on the Indian Union system