ಚಿಕ್ಕಮಗಳೂರು:  ರಾಮನಗರದ ಐಜೂರು ಪೊಲೀಸ್ ಠಾಣೆಯಲ್ಲಿ ಸುಮಾರು ೪೦ ವಕೀಲರ ಮೇಲೆ ಸುಳ್ಳು ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಇಂದು ಚಿಕ್ಕಮಗಳೂರು ವಕೀಲರ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಇಂದು ಬೆಳಗ್ಗೆ ವಕೀಲರ ಸಂಘದ ಅಧ್ಯಕ್ಷ ಹೆಚ್.ಎಂ ಸುಧಾಕರ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಸಂಬಂಧಿಸಿದ ಪೊಲೀಸ್ ಅಧಿಕಾರಿಗಳನ್ನು ಅಮಾನತ್ ಮಾಡಬೇಕೆಂದು ಆಗ್ರಹಿಸಿದರು.

ರಾಮನಗರದ ಜಿಲ್ಲಾ ನ್ಯಾಯಾಲಯದಲ್ಲಿ ವಕೀಲ ವೃತ್ತಿ ನಡೆಸುತ್ತಿರುವ ಸುಮಾರು ೪೦ ವಕೀಲರ ಮೇಲೆ ರಾಮನಗರದ ಐಜೂರು ಪೊಲೀಸ್ ಅಧಿಕಾರಿಗಳು ಸುಳ್ಳು ಪ್ರಕರಣವನ್ನು ದಾಖಲಿಸಿದ್ದು, ಈ ಘಟನೆಯನ್ನು ಖಂಡಿಸಿ ರಾಜ್ಯಾದ್ಯಂತ ಇಂದು ಎಲ್ಲಾ ವಕೀಲರ ಸಂಘದವರು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಚಿಕ್ಕಮಗಳೂರು ವಕೀಲರ ಸಂಘ ಈ ದಿನ ತುರ್ತು ಸಭೆಯನ್ನು ಕರೆದು ರಾಮನಗರದ ವಕೀಲರ ಮೇಲೆ ಪ್ರಕರಣ ದಾಖಲಿಸಿರುವ ಸಂಬಂಧ ಚರ್ಚಿಸಿ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿ ಮನವಿ ಕೊಡುವಂತೆ ನಿರ್ಣಯಿಸಲಾಯಿತು ಎಂದು ಅಧ್ಯಕ್ಷರು ತಿಳಿಸಿದ್ದಾರೆ.

ರಾಮನಗರದ ವಕೀಲರ ಮೇಲೆ ಸುಳ್ಳು ಪ್ರಕರಣದ ದಾಖಲಿಸಿರುವ ಐಜೂರು ಪೊಲೀಸ್ ಅಧಿಕಾರಿಗಳನ್ನು ಅಮಾನತ್ತುಗೊಳಿಸುವಂತೆ ಕೋರಿ ತಮಗೆ ಮನವಿಯನ್ನು ಸಲ್ಲಿಸುತ್ತಿದ್ದು ತಾವುಗಳು ಸಂಬಂಧಪಟ್ಟ ಇಲಾಖೆಗಳಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಬೇಕೆಂದು ಈ ಮೂಲಕ ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಸಂಘದ ಕಾರ್ಯದರ್ಶಿ ಟಿ.ಬಿ ರುದ್ರೇಶ್, ಸಹಕಾಯದರ್ಶಿ ಪ್ರದೀಪ್, ಡಿ.ಬಿ ಸುಜೇಂದ್ರ, ಪರಮೇಶ್ವರ್, ಬಿ.ಆರ್ ಜಗದೀಶ್, ಕೃ?ಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.

Appeal to the District Collector for filing a false case against the lawyer