ಕನ್ನಡ ಪುಸ್ತಕ ಪ್ರಾಧಿಕಾರವು ದಿನಾಂಕ: 10.03.2022 ರಿಂದ 15.03.2022ರವರೆಗೆ ಆರು ದಿನಗಳ ಕಾಲ “ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳ-2022”ನ್ನು ಮಹಾರಾಜ ಕಾಲೇಜು ಮೈದಾನ, ಮೈಸೂರು – ಇಲ್ಲಿ ಏರ್ಪಡಿಸಲಾಗಿದೆ. ಈ ಪುಸ್ತಕ ಮೇಳದಲ್ಲಿ ಭಾಗವಹಿಸಲು ಆಸಕ್ತಿ ಇರುವ ರಾಜ್ಯದ ಎಲ್ಲಾ ಕನ್ನಡ ಪುಸ್ತಕ ಪ್ರಕಾಶಕರು / ಮಾರಾಟಗಾರರು ಅರ್ಜಿ ಸಲ್ಲಿಸಿ ಮಾರಾಟ ಮಳಿಗೆಯನ್ನು ಕಾಯ್ದಿರಿಸಲು ಕೋರಿದೆ. ಅರ್ಜಿ ಸಲ್ಲಿಸಲು 08.03.2022ರಂದು ಸಂಜೆ 5.00ಗಂಟೆಯವರೆಗೆ ಅವಕಾಶ ಕಲ್ಪಿಸಿದೆ. ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ನಿಗದಿತ ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರಿನ ಕಛೇರಿ ಅಥವಾ ಆಯಾ ಜಿಲ್ಲೆಯಲ್ಲಿರುವ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಛೇರಿಗಳಲ್ಲಿ ಅಥವಾ ಪ್ರಾಧಿಕಾರದ ವೆಬ್ಸೈಟ್ನಲ್ಲಿ ಅಂದರೆ www.kannadapustakapradhikara.com ನಲ್ಲಿ ಪಡೆದುಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ : ಕನ್ನಡ ಪುಸ್ತಕ ಪ್ರಾಧಿಕಾರದ ವೆಬ್ಸೈಟ್ನಲ್ಲಿ ಅಂದರೆ www.kannadapustakapradhikara.com ನಲ್ಲಿ ಅಥವಾ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560 002 ದೂ: 080-22484516 / 22107704 ಅನ್ನು ಸಂಪರ್ಕಿಸಬಹುದಾಗಿದೆ.

ಇದನ್ನೂ ಓದಿ: Maha Shivaratri 2022: ಮಹಾ ಶಿವರಾತ್ರಿ ದಿನ ಉಪವಾಸ ಮಾಡುವುದೇಕೆ? ಯಾವ ಆಹಾರ ಸೇವಿಸಬಹುದು?

ಇದನ್ನೂ ಓದಿ: Maha Sivaratri 2022: ಏಕ ಅನೇಕ: ಮಹಾಶಿವರಾತ್ರಿಯಂದು ಶಿವನಿಗೆ ನಾಟ್ಯ ಮತ್ತು ಸಂಗೀತ ನಮನ

(Application for reserving Stall in Mysore kannada Book Exhibition)