ಚಿಕ್ಕಮಗಳೂರು:  ಏಪ್ರಿಲ್ ೧೪ ಹಾಗೂ ೨೦ರಂದು ಆಳ್ವಾಸ್ ಶೈಕ್ಷಣಿಕ ವಿದ್ಯಾರ್ಥಿ ವೇತನ ಪ್ರವೇಶ ಪರೀಕ್ಷೆ ಎಪ್ರಿಲ್ ೧೪ ಮತ್ತು ೨೦ರಂದು ನಡೆಯಲಿದ್ದು ಇದು ಸರ್ವರಿಗೆ ಸದಾವಕಾಶವಾಗಿದೆ. ಸಿಬಿಎಸ್‌ಇ, ಐಸಿಎಸ್‌ಸಿ ಮತ್ತು ರಾಜ್ಯ ಪಠ್ಯಕ್ರಮದ ಕನ್ನಡ ಮಾಧ್ಯಮ, ಇಂಗ್ಲಿಷ್ ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ ಎಂದು ಶಾಲೆ ಮುಖ್ಯಸ್ಥ ಪ್ರತಾಪ್‌ಶೆಟ್ಟಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿಂದು ಈ ವಿ?ಯ ತಿಳಿಸಿದ ಅವರು, ನಾಲ್ಕು ದಶಕಗಳಿಂದ ನಾಡಿನ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತಾ ಶೈಕ್ಷಣಿಕ, ಕ್ರೀಡಾ ಹಾಗೂ ಸಾಂಸ್ಕೃತಿಕ ದತ್ತು ಸ್ವೀಕಾರ, ಸಹಾಯಧನ, ಪ್ರೋತ್ಸಾಹಧನ, ವಿವಿಧ ಶಿ?ವೇತನ ಬಹುಮಾನ ಪುರಸ್ಕಾರಗಳನ್ನು ನೀಡುತ್ತಾ ಬಂದಿರುವ ಆಳ್ವಾಸ್ ಶಿಕ್ಷಣ ಪ್ರತಿ?ನವು ಈ ಬಾರಿ ಪಿಯುಸಿ (ಪದವಿ ಪೂರ್ವ) ವಿದ್ಯಾರ್ಥಿಗಳಿಗೆ ಎರಡು ವ?ಕ್ಕೆ ೧೦ ಕೋಟಿಗೂ ಅಧಿಕ ಮೌಲ್ಯದ ಶೈಕ್ಷಣಿಕ ವಿದ್ಯಾರ್ಥಿ ವೇತನ ಘೋಷಿಸಿದೆ ಎಂದರು.

ಹತ್ತನೇ ತರಗತಿಯಲ್ಲಿ ಸಿಬಿಎಸ್ಸಿ (ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ) ಐಸಿಎಸ್‌ಇ (ಭಾರತೀಯ ಪ್ರೌಢ ಶಿಕ್ಷಣ ಪ್ರಮಾಣ ಪತ್ರ) ಹಾಗೂ ರಾಜ್ಯ ಪಠ್ಯಕ್ರಮ (ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ) ಪರೀಕ್ಷೆ ಬರೆದ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಬಹುದಾಗಿದೆ ಎಂದು ಹೇಳಿದರು.

ವಿದ್ಯಾರ್ಥಿಗಳ ಪ್ರವೇಶ ಪರೀಕ್ಷೆಯ ಅಂಕಗಳನ್ನು ಪರಿಗಣಿಸಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆ ಮಾಡಲಾಗುವುದು ವಿದ್ಯಾರ್ಥಿ ವೇತನಕ್ಕೆ ಅರ್ಹತೆ ಪಡೆದ ವಿದ್ಯಾರ್ಥಿಗಳು ದೇಶದಲ್ಲೇ ಅತ್ಯುತ್ತಮ ಮತ್ತು ಅನನ್ಯ ಮಾದರಿಯ ಶಿಕ್ಷಣ ನೀಡುತ್ತಿರುವ ಕಾಲೇಜಿನಲ್ಲಿ ವಿಜ್ಞಾನ, ವಾಣಿಜ್ಯ ಅಥವಾ ಕಲಾ ವಿಭಾಗದಲ್ಲಿ ಪದವಿ ಪೂರ್ವ ಶಿಕ್ಷಣ ಪಡೆಯಲು ಅರ್ಹರಾಗಿರುತ್ತಾರೆ ಎಂದು ಮಾಹಿತಿ ನೀಡಿದರು.

ಗಣಿತ, ವಿಜ್ಞಾನ ಹಾಗೂ ಸಾಮಾನ್ಯ ಸಾಮರ್ಥ್ಯ ಕುರಿತು ೧೨೦ ನಿಮಿ?ಗಳ ಪರೀಕ್ಷೆಯು ಏಪ್ರಿಲ್ ೧೪ ಹಾಗೂ ೨೦ರಂದು ಎರಡು ಬಾರಿ ನಡೆಯಲಿದೆ. ಸಿಬಿಎಸ್‌ಸಿ ಮತ್ತು ಐಸಿಎಸ್‌ಸಿ ಹಾಗೂ ರಾಜ್ಯ ಪಠ್ಯಕ್ರಮದ ವಿದ್ಯಾರ್ಥಿಗಳು ಮೂಡುಬಿದಿರೆಯ ವಿದ್ಯಾಗಿರಿ ಶ್ರೀಮತಿ ಸುಂದರಿ ಆಳ್ವ ಅವರಣದಲಿನ್ಲ ಆಳ್ವಾಸ್ ಪದವಿ ಪೂರ್ವ ಕಾಲೇಜಿಗೆ ಆಗಮಿಸಿ ಪರೀಕ್ಷೆ ಬರೆಯಬಹುದು. ಇಂಗ್ಲಿ? ಮಾಧ್ಯಮದಲ್ಲಿ ಪರೀಕ್ಷಾ ಪತ್ರಿಕೆ ಇರಲಿದೆ ಎಂದು ವಿವರಿಸಿದರು.

ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ಈ ವೆಬ್ಸೈಟ್ https://scholarship.alvas.org/puc/login.php ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಶೈಕ್ಷಣಿಕ ವಿದ್ಯಾರ್ಥಿ ವೇತನ ಪ್ರವೇಶ ಪರೀಕ್ಷೆಯ ಅಂಕದ ಆಧಾರದ ಮೇಲೆ ಆಯ್ಕೆಯ ಜೊತೆಯಲ್ಲಿ ಪ್ರತ್ಯೇಕವಾಗಿ ಪ್ರತಿ ವ?ದಂತೆ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಅಂಕವನ್ನು ಪರಿಗಣಿಸಿ ಕ್ರೀಡೆ ಹಾಗೂ ಸಾಂಸ್ಕೃತಿಕ ವಿಭಾಗದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿಶೇ? ಆದ್ಯತೆಯ ಮೇಲೂ ಆಯ್ಕೆಗಳು ನಡೆಯುತ್ತವೆ ಎಂದರು.

ಪರೀಕ್ಷೆಯ ದಿನ ಪ್ರತಿಭಾನ್ವಿತ ವಿದ್ಯಾರ್ಥಿಗಳು ಹಾಗೂ ಪೋ?ಕರ ಜೊತೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ.ಮೋಹನ ಆಳ್ವ ಸಮಾಲೋಚನೆ ನಡೆಸಲಿದ್ದಾರೆ.
ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ : ೮೮೮೪೪೭೭೫೮೮/ ೬೩೬೬೩೭೭೮೨೭/ ೬೩೬೬೩೭೭೮೨೩ ಸಂಪರ್ಕಿಸಬಹುದಾಗಿದೆ

April 14 Alwas Academic Entrance Test