ಬೆಂಗಳೂರು: ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ಕಾನೂನು ತಜ್ಞರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಲ್ಲಿಸಿರುವ ಅರ್ಜಿ ಇದೇ 30 ರಂದು ಸರ್ವೋಚ್ಚ ನ್ಯಾಯಾಲಯದಲ್ಲಿ ವಿಚಾರಣೆಗೆ ಬರಲಿರುವ ಹಿನ್ನೆಲೆಯಲ್ಲಿ ಹಿರಿಯ ನ್ಯಾಯಮೂರ್ತಿಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ, ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಿದರು.

ಸಚಿವರಾದ ಗೋವಿಂದ ಕಾರಜೋಳ, ಆರಗ ಜ್ಞಾನೇಂದ್ರ, ರಾಜ್ಯ ಅಡ್ವೊಕೇಟ್  ಜನರಲ್ ಪ್ರಭುಲಿಂಗ ನಾವಡಗಿ, ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಹಾಗೂ ಕರ್ನಾಟಕ ಗಡಿ ಮತ್ತು ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷ  ಶಿವರಾಜ.ವಿ. ಪಾಟೀಲ್,  ಹಿರಿಯ ವಕೀಲರಾದ ಉದಯ ಹೊಳ್ಳ,ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ:ಸಿ.ಸೋಮಶೇಖರ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಮೊದಲಾದವರು ಉಪಸ್ಥಿತರಿದ್ದರು.

Belagavi border dispute: