ನವದೆಹಲಿ: ಕರ್ನಾಟಕದ “ಕಾಡು ಕುರುಬ” ಜೊತೆಗೆ “ಬೆಟ್ಟ-ಕುರುಬ” ಸಮುದಾಯವನ್ನು ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸುವ ಮಸೂದೆಯನ್ನು ಸಂಸತ್ತು ಗುರುವಾರ ಅಂಗೀಕರಿಸಿದೆ. ಲೋಕಸಭೆ ಅಂಗೀಕಾರಗೊಂಡಿದ್ದ ಮಸೂದೆಯನ್ನ ಇಂದು ರಾಜ್ಯಸಭೆಯಲ್ಲಿ ಧ್ವನಿ ಮತದ ಮೂಲಕ ಸಂವಿಧಾನ(ಪರಿಶಿಷ್ಟ ಬುಡಕಟ್ಟು) ಆದೇಶ (ನಾಲ್ಕನೇ ತಿದ್ದುಪಡಿ) ಮಸೂದೆ, 2022 ಅನ್ನು ಅಂಗೀಕರಿಸಲಾಯಿತು.

ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ಅವರು ಮೇಲ್ಮನೆಯಲ್ಲಿ ಮಂಡಿಸಿದ ಮಸೂದೆಯನ್ನು ಲೋಕಸಭೆಯು ಡಿಸೆಂಬರ್ 19 ರಂದು ಅಂಗೀಕರಿಸಿತ್ತು. ಈ ಮಸೂದೆ ದಕ್ಷಿಣ ರಾಜ್ಯದಲ್ಲಿ ಕೇವಲ 5,000 ಸದಸ್ಯರನ್ನು ಹೊಂದಿರುವ ಕರ್ನಾಟಕದ ಬೆಟ್ಟ-ಕುರುಬ ಸಮುದಾಯಕ್ಕೆ ನ್ಯಾಯ ಒದಗಿಸಲಿದೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ.

‘ಬೆಟ್ಟ-ಕುರುಬ’ ಸಮುದಾಯವನ್ನು ಕರ್ನಾಟಕದ ಪರಿಶಿಷ್ಟ ಪಂಗಡಗಳ ಪಟ್ಟಿಗೆ ‘ಕಾಡು ಕುರುಬ’ ಎಂಬ ಪದಕ್ಕೆ ಸಮಾನಾರ್ಥಕ ಪದವಾಗಿ ಸೇರಿಸಲು ಕರ್ನಾಟಕ ರಾಜ್ಯ ಸರ್ಕಾರ ಮನವಿ ಮಾಡಿತ್ತು ಎಂದು ಮಸೂದೆಯ ಉದ್ದೇಶ ಮತ್ತು ಕಾರಣಗಳನ್ನು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರತಿಪಕ್ಷದ ಸದಸ್ಯರು ಪ್ರಸ್ತಾಪಿಸಿದ ವಿಷಯಗಳಿಗೆ ಪ್ರತಿಕ್ರಿಯಿಸಿದ ಮುಂಡಾ, ಬುಡಕಟ್ಟು ಸಮುದಾಯದ ಕಲ್ಯಾಣಕ್ಕಾಗಿ ಕಾಂಗ್ರೆಸ್ ಏನೂ ಮಾಡಿಲ್ಲ ಮತ್ತು ಈಗ ಮೊಸಳೆ ಕಣ್ಣೀರು ಸುರಿಸುತ್ತಿದೆ ಎಂದು ಆರೋಪಿಸಿದರು. ಸಮಾಜದ ಎಲ್ಲ ವರ್ಗದವರಿಗೂ ನ್ಯಾಯ ಕೊಡಿಸಲು ಮೋದಿ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಮುಂಡಾ ಹೇಳಿದ್ದಾರೆ.

betta-Kuruba community included in ST: