ಚಿಕ್ಕಮಗಳೂರು:  ದಿನನಿತ್ಯದ ಜೀವನದಲ್ಲಿ ಸಿರಿ ಧಾನ್ಯಗಳನ್ನು ಬಳಸುವುದರಿಂದ ಅನೇಕ ರೋಗ ರುಜಿನಗಳಿಂದ ಮುಕ್ತರಾಗಬಹುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗೋಪಾಲಕೃಷ್ಣ ಹೇಳಿದರು.

ಇತ್ತೀಚಿನ ದಿನಗಳಲ್ಲಿ ವರ್ಷದಿಂದ ವರ್ಷಕ್ಕೆ ದೇಶದಲ್ಲಿ ಸಿರಿಧಾನ್ಯದ ಮಹತ್ವ ಹೆಚ್ಚುತ್ತಿದೆ. ಭಾರತ ದೇಶ ಸಿರಿಧಾನ್ಯದ ರಾಜಧಾನಿಯಾಗಿದೆ ಜಗತ್ತಿನಲ್ಲಿ ಬೆಳೆಯುವ ಸಿರಿಧಾನ್ಯಗಳ ಪೈಕಿ ಶೇ ೪೨ರಷ್ಟು ಸಿರಿಧಾನ್ಯವನ್ನು ನಮ್ಮ ದೇಶದಲ್ಲೇ ಬೆಳೆಯಲಾಗುತ್ತಿದೆ ಸಿರಿಧಾನ್ಯ ಬೆಳೆಯುವಲ್ಲಿ ನಮ್ಮ ರಾಜ್ಯ ಸಹ ಮುಂದಿದೆ ಎಂದು ತಿಳಿಸಿದರು.

ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವವರಿಗೆ ಸಿರಿಧಾನ್ಯ ಅತ್ಯುತ್ತಮ ಔಷಧಿಯಾಗಿದೆ ಬಹಳ ಕಡಿಮೆ ನೀರಿನಲ್ಲೂ ಸಿರಿಧಾನ್ಯವನ್ನು ಬೆಳೆಯಬಹುದಾಗಿದೆ ಎಂದರು.

ರೋಗಮುಕ್ತ ಜೀವನಕ್ಕಾಗಿ ಎಲ್ಲರೂ ಸಿರಿ ಧಾನ್ಯಗಳ ಬಳಕೆಗೆ ಮುಂದಾಗಬೇಕು ನಮ್ಮ ರೈತರು ಸಿರಿಧಾನ್ಯವನ್ನು ಹೆಚ್ಚು ಬೆಳೆಯಬೇಕು ಎಂದು ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ನಾರಾಯಣ ರಡ್ಡಿ ಕನಕರಡ್ಡಿ, ಜಂಟಿ ಕೃಷಿ ನಿರ್ದೇಶಕರು ಸುಜಾತ ಹೆಚ್.ಎಲ್., ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Cereal Walk with slogan Our Walk Towards Organic Cereal