ಹಾಸನ: ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕ ಶ್ರೀ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದ ಅವರು ವಿಧಿವಶರಾಗಿದ್ದಾರೆ.

1949ರ ಮೇ 3ರಂದು ಜನಿಸಿದ ಶ್ರೀಗಳು, 1970ರಲ್ಲಿ ಮಠದ ಪೀಠಾಧಿಪತಿಗಳಾಗಿ ನೇಮಕಗೊಂಡಿದ್ದರು. ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ತತ್ವಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಗಳಿಸಿದ್ದ ಅವರು ಬಳಿಕ ಮೈಸೂರು ಯೂನಿವರ್ಸಿಟಿಯಲ್ಲಿ ಇತಿಹಾಸ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು. ಇಷ್ಟೇ ಅಲ್ಲದೇ ಚಾರುಕೀರ್ತಿ ಭಟ್ಟಾರಕ ಶ್ರೀಗಳು ಪ್ರಾಕೃತ, ಸಂಸ್ಕೃತ ಹಾಗೂ ಕನ್ನಡ ಭಾಷೆಯಲ್ಲಿ ಪರಿಣತಿ ಹೊಂದಿದ್ದರು.

ಇನ್ನು ಚಾರುಕೀರ್ತಿ ಭಟ್ಟಾರಕ ಶ್ರೀಗಳು ಮಾಜಿ ಪ್ರಧಾನಿ ಇಂದಿರಾ ಗಾಂಧಿಯಿಂದ ಕರ್ಮಯೋಗಿ ಎಂಬ ಬಿರುದು ಪಡೆದಿದ್ದರು. ಶ್ರವಣ ಬೆಳಗೊಳದಲ್ಲಿ ನಡೆದ ನಾಲ್ಕು ಮಹಾಮಸ್ತಕಾಭಿಷೇಕ ಇವರ ಸುಪರ್ದಿಯಲ್ಲಿ ನೆರವೇರಿತ್ತಿ ಎಂಬುವುದು ಉಲ್ಲೇಖನೀಯ.