ಬೆಂಗಳೂರು: ಕಾಂಗ್ರೆಸ್ ವಿಧಾನಸಭೆ ಚುನಾವಣೆಯ ಟಿಕೆಟ್ ಆಕಾಂಕ್ಷಿಗಳಿಗೆ ಮಂಗಳವಾರ ಸಿಹಿ ಸುದ್ದಿ ನೀಡಿದ್ದು, ಟಿಕೆಟ್ ಗಾಗಿ ಅರ್ಜಿ ಸಲ್ಲಿಕೆ ಅವಧಿಯನ್ನು ನವೆಂಬರ್ 21ರ ವರೆಗೆ ವಿಸ್ತರಿಸಲಾಗಿದೆ.

ಕಾಂಗ್ರೆಸ್ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನವಾಗಿತ್ತು. ಆದರೆ ಅವಧಿ ವಿಸ್ತರಿಸುವಂತೆ ಟಿಕೆಟ್ ಆಕಾಂಕ್ಷಿಗಳಿಂದ ಒತ್ತಡ ಹೆಚ್ಚಾದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಆರು ದಿನ ಅವಧಿ ವಿಸ್ತರಣೆ ಮಾಡಿದ್ದಾರೆ. ಅಲ್ಲದೆ ಕಾಂಗ್ರೆಸ್ ಟಿಕೆಟ್​ಗಾಗಿ ಖುದ್ದು ಡಿಕೆಶಿ ಅರ್ಜಿ ಸಲ್ಲಿಸಿದ್ದಾರೆ.

ಇಂದು ರಾಮನಗರ ಜಿಲ್ಲೆ ಕನಕಪುರ ಕ್ಷೇತ್ರದ ಟಿಕೆಟ್​ಗಾಗಿ ಡಿಕೆ ಶಿವಕುಮಾರ್ ಅವರು ಅರ್ಜಿ ಸಲ್ಲಿಸಿದ್ದಾರೆ. ಡಿಕೆ ಶಿವಕುಮಾರ್ ಅವರು ಖುದ್ದು ಅರ್ಜಿ ಸಲ್ಲಿಸುವ ಮೂಲಕ ಇತರೆ ನಾಯಕರಿಗೆ ಪರೋಕ್ಷವಾಗಿ ಸಂದೇಶ ರವಾನಿಸಿದ್ದಾರೆ.

ಕ್ಷೇತ್ರದ ಟಿಕೆಟ್​ಗಾಗಿ ಅರ್ಜಿ ಸಲ್ಲಿಸಲು ನವೆಂಬರ್ 21ರ ವರೆಗೆ ಅವಕಾಶ ನೀಡಲಾಗಿದೆ. ಆದರೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನ ಅವರು ಮುಂದಿನ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರೆ ಎನ್ನುವುದು ಇನ್ನೂ ಅಧಿಕೃತವಾಗಿಲ್ಲ. ಆದರೆ ಡಿಕೆ ಶಿವಕುಮಾರ್ ಅವರು ಅರ್ಜಿ ಹಾಕುವ ಮೂಲಕ ಕ್ಷೇತ್ರ ಆಯ್ಕೆ ವಿಚಾರವಾಗಿ ಸಿದ್ದರಾಮಯ್ಯ ನಡೆ ಬಹಿರಂಗಗೊಳಿಸಲು ತಂತ್ರ ರೂಪಿಸಿದ್ದಾರೆ ಎನ್ನಲಾಗಿದೆ.

DK Shivakumar himself applied for a Congress ticket.