ಬೆಂಗಳೂರು: ಪ್ಯಾನ್ ಜೊತೆಗೆ ಆಧಾರ್ ಕಾರ್ಡ್ ಜೋಡಣೆಗೆ ಜೂನ್ 30 ರ ವರೆಗೆ ಅವಧಿ ವಿಸ್ತರಿಸಿ ಹಣಕಾಸು ಸಚಿವಾಲಯ ಆದೇಶ ಹೊರಡಿಸಿದೆ.
ಪ್ಯಾನ್ ಜೊತೆಗೆ ಆಧಾರ್ ಲಿಂಕ್ಗೆ ಮಾ.31 ಕೊನೆ ದಿನವಾಗಿತ್ತು. ಈ ಅವಧಿಯನ್ನು ವಿಸ್ತರಿಸಲಾಗಿದೆ. 2023ರ ಜೂನ್ 30 ರ ವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
In order to provide some more time to the taxpayers, the date for linking PAN & Aadhaar has been extended to 30th June, 2023, whereby persons can intimate their Aadhaar to the prescribed authority for PAN-Aadhaar linking without facing repercussions.
(1/2) pic.twitter.com/EE9VEamJKh— Income Tax India (@IncomeTaxIndia) March 28, 2023
ಒಬ್ಬ ವ್ಯಕ್ತಿ ಒಂದಕ್ಕಿಂತ ಹೆಚ್ಚು ಪ್ಯಾನ್ ಕಾರ್ಡ್ ಹೊಂದಿರುವುದನ್ನು ತಪ್ಪಿಸುವ ಉದ್ದೇಶದಿಂದ ಆಧಾರ್ ಜೊತೆಗೆ ಪ್ಯಾನ್ ಲಿಂಕ್ ಮಾಡಿಸಬೇಕು ಎಂದು ಆದೇಶ ಹೊರಡಿಸಲಾಗಿತ್ತು. ಲಿಂಕ್ ಮಾಡಿಸಲು ಮಾ.31 ಕೊನೆ ದಿನವಾಗಿತ್ತು. ಇದಕ್ಕೆ ಜನಾಕ್ರೋಶ ವ್ಯಕ್ತವಾದ ಬೆನ್ನಲ್ಲೆ ಗಡುವು ಮೂರು ತಿಂಗಳವರೆಗೆ ವಿಸ್ತರಣೆ ಮಾಡಲಾಗಿದೆ.
Extension of time till June 30 for linking Aadhaar card with PAN