ಚಿಕ್ಕಮಗಳೂರು: ಎಸ್‌ಸಿ, ಎಸ್‌ಟಿ ಜನಾಂಗದವರು ತಮ್ಮ ಏಳಿಗೆ ಮತ್ತು ಅಭಿವೃದ್ಧಿಗಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಮತನೀಡಿ ಬೆಂಬಲಿಸಬೇಕೆಂದು ಕೆಪಿಸಿಸಿ ಎಸ್‌ಸಿ ವಿಭಾಗದ ರಾಜ್ಯಾಧ್ಯಕ್ಷ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಧರ್ಮಸೇನಾ ಮನವಿ ಮಾಡಿದರು.

ಅವರು ಇಂದು ನಗರಕ್ಕಾಗಮಿಸಿದ್ದ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಎಸ್‌ಸಿ, ಎಸ್‌ಟಿ ಜನಾಂಗಕ್ಕೆ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸಲಾಗುತ್ತಿದೆ ಎಂದರು.

ರಾಜ್ಯದಲ್ಲಿ ಕಳೆದ ಹತ್ತು ವ?ಗಳ ಬಿಜೆಪಿ ಆಡಳಿತದಲ್ಲಿ ಮತ್ತು ಕೇಂದ್ರದ ಬಿಜೆಪಿ ಆಡಳಿತದಲ್ಲಿ ವಿದ್ಯಾರ್ಥಿ ವೇತನ ಸೇರಿದಂತೆ ಎಸ್‌ಸಿ, ಎಸ್‌ಟಿ ಜನಾಂಗಕ್ಕೆ ಜಾರಿಗೊಳಿಸಿದ್ದ ಎಲ್ಲಾ ಯೋಜನೆಗಳನ್ನು ಮೊಟಕುಗೊಳಿಸಿದ್ದಲ್ಲದೆ ಅಂಬೇಡ್ಕರ್ ಬರೆದ ಸಂವಿಧಾನವನ್ನೇ ಬದಲಾಯಿಸುವ ಪ್ರಯತ್ನ ಮಾಡಿದರು. ಬಿಜೆಪಿ ಎಸ್‌ಸಿ, ಎಸ್‌ಟಿ ಜನಾಂಗಕ್ಕೆ ದೊಡ್ಡ ಅನ್ಯಾಯ ಮಾಡಿತ್ತು ಎಂದು ಆರೋಪಿಸಿದರು.

ಕಳೆದ ಜನವರಿ ೮ ರಂದು ಚಿತ್ರದುರ್ಗದಲ್ಲಿ ನಡೆದ ಎಸ್‌ಸಿ, ಎಸ್‌ಟಿ ಸಮಾವೇಶದಲ್ಲಿ ಕೈಗೊಂಡಿದ್ದ ೧೦ ನಿರ್ಣಯಗಳನ್ನು ಬಜೆಟ್‌ನಲ್ಲಿ ಘೋ?ಣೆ ಮಾಡುವ ಮೂಲಕ ಬಹುಪಾಲು ಎಲ್ಲಾ ಯೋಜನೆಗಳನ್ನು ಅನು?ನಕ್ಕೆ ತರಲಾಗುತ್ತಿದೆ. ಒಂದು ಕೋಟಿ ರೂ ವರೆಗೆ ಕಾಮಗಾರಿ ಗುತ್ತಿಗೆ ನೀಡುವುದು ಹಾಗೂ ಪಿಟಿಸಿಎಲ್ ಕಾಯ್ದೆಯನ್ನು ಮರು ಜಾರಿಗೊಳಿಸುವ ಐತಿಹಾಸಿಕ ತೀರ್ಮಾನ ಕೈಗೊಂಡಿದ್ದು ಅದನ್ನು ಅನು?ನಗೊಳಿಸಲಾಗುತ್ತಿದೆ ಎಂದು ಹೇಳಿದರು.

ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಯ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿರುವ ಕುರಿತು ಗಮನ ಸೆಳೆದಾಗ ಪ್ರತಿಕ್ರಿಯಿಸಿದ ಅವರು ಗ್ಯಾರಂಟಿ ಯೋಜನೆಗಳಿಗೆ ಬಜೆಟ್‌ನಲ್ಲಿಯೇ ಅನುದಾನ ಘೋಷಿಸಿ, ಅನುಷ್ಠಾನಗೊಳಿಸಲಾಗುತ್ತಿದೆ. ಎಸ್‌ಸಿ, ಎಸ್‌ಟಿ ಅನುದಾನ ಬಳಸಿಕೊಳ್ಳುವುದಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಹೆಚ್.ಸಿ ಮಹದೇವಪ್ಪ ಅವರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ ಎಂದು ತಿಳಿಸಿದರು.

ಜಾತಿ ಜನಗಣತಿ ಕಾಂತರಾಜ್ ಆಯೋಗದ ವರದಿಯ ಜಾರಿಗೆ ವಿಳಂಭವಾಗುತ್ತಿರುವ ಬಗ್ಗೆ ಕೇಳಿದಾಗ ಉತ್ತರಿಸಿದ ಅವರು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಅವಧಿಯನ್ನು ೨ ತಿಂಗಳವರೆಗೆ ಮುಂದುವರೆಸಲಾಗಿದೆ. ಕಾಂತರಾಜ್ ಆಯೋಗದ ವರದಿ ಜಾರಿಗೊಳಿಸಲು ಕಾಂಗ್ರೆಸ್ ಸರ್ಕಾರ ಬದ್ದವಾಗಿದೆ. ಅದೇ ರೀತಿ ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸಲು ಸಿದ್ದವಿದ್ದು, ಈ ವರದಿಯ ಮೀಸಲಾತಿ ತಿದ್ದುಪಡಿಗೆ ಕೇಂದ್ರಸರ್ಕಾರಕ್ಕೆ ಅವಕಾಶವಿಲ್ಲ. ಸಂಸತ್ತಿನಲ್ಲಿ ತಿದ್ದುಪಡಿಯ ಕಾನೂನು ತರಬೇಕು ಈ ಕಾರಣಕ್ಕಾಗಿ ಸದಾಶಿವ ಆಯೋಗದ ವರದಿ ಜಾರಿ ವಿಳಂಭವಾಗುತ್ತಿದೆ ಎಂದರು.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಾಕಿ ಇದ್ದ ಸಮುದಾಯ ಭವನಗಳ ನಿರ್ಮಾಣ ಸೇರಿದಂತೆ ಎಲ್ಲಾ ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೂಲಕ ಎಸ್‌ಸಿ, ಎಸ್‌ಟಿ ಜನಾಂಗದವರು ಅಭಿವೃದ್ಧಿಗಾಗಿ ಕಾಂಗ್ರೆಸ್ ಸರ್ಕಾರ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದೆ. ಕಾಂಗ್ರೆಸ್ ಪಕ್ಷದಿಂದ ಮಾತ್ರ ಈ ಜನಾಂಗದ ಅಭಿವೃದ್ಧಿ ಸಾಧ್ಯವಿರುವುದರಿಂದ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಪ.ಜಾ ವಿಭಾಗದ ಮುಖಂಡರುಗಳಾದ ಹಿರೇಮಗಳೂರು ರಾಮಚಂದ್ರ, ಕಾಳಯ್ಯ, ಈಶ್ವರ, ಗಂಗಾಧರ್, ನೇತ್ರಾವತಿ, ರಾಜಶೇಖರ್ ಉಪಸ್ಥಿತರಿದ್ದರು.

Former Legislative Council member Dharmasena press conference