ಬೆಂಗಳೂರು, ನವೆಂಬರ್‌ 26: ದೇಶದ ವಿವಿಧ ಭಾಗಗಳಿಂದ ಆಗಮಿಸುವ ಕರಕುಶಲಕರ್ಮಿಗಳಿಗೆ ಸೂಕ್ತವಾದ ಮಾರುಕಟ್ಟೆಯನ್ನು ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ನವೆಂಬರ್‌ 26 ರಿಂದ ಡಿಸೆಂಬರ್‌ 5 ರ ವರೆಗೆ ಆಯೋಜಿಸಲಾಗಿರುವ ಕರಕುಶಲಮೇಳಕ್ಕೆ ಇಂದು ನಟಿ ಅಶ್ವಿನಿ ರಾವ್‌ ಹಾಗೂ ರಿಯಾ ಅವರು ಚಾಲನೆ ನೀಡಿದರು.

ಕೊರೋನಾ ಲಾಕ್‌ಡೌನ್‌ ನಿಂದಾಗಿ ಮನೆಯಲ್ಲಿಯೇ ಇದ್ದು ಬೇಸರಗೊಂಡಿರುವ ಜನರ ಬೇಸರ ದೂರಮಾಡಬಲ್ಲ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಇಲ್ಲಿ ಕಲ್ಪಿಸಲಾಗಿದೆ. ಅಲಂಕಾರಿಕ ವಸ್ತುಗಳ ಜೊತೆಯಲ್ಲಿಯೇ ಮನೆ ಮಂದಿಗೆ ಬೇಕಾಗಿರುವ ಬಟ್ಟೆಗಳು ಹಾಗೂ ಇನ್ನಿತರೆ ವಸ್ತುಗಳನ್ನೂ ಖರೀದಿಸುವ ವ್ಯವಸ್ಥೆಯಿದೆ. 80 ಕ್ಕೂ ಹೆಚ್ಚು ಅಂಗಡಿಗಳಿದ್ದು ದೇಶದ ಎಲ್ಲಾ ಭಾಗಗಳಿಂದ ಆಗಮಿಸಿರುವ ಕಲಾವಿದರುಗಳು ತಮ್ಮ ಕಲೆಯನ್ನು ಪ್ರದರ್ಶನಕ್ಕೆ ಇಡಲಿದ್ದಾರೆ. ದೇಶದ ವಿವಿಧ ಮೂಲೆಗಳ ಕಲಾವಿದರ ಕಲಾಕೃತಿಗಳು ಹಾಗೂ ಉತ್ಪನ್ನಗಳು ನೇರವಾಗಿ ಜನರಿಗೆ ತಲುಪಲಿವೆ. ನಿಮ್ಮ ಮನೆಯ ಗಾರ್ಡನ್‌ ಅಲಂಕರಿಸಲು, ನಿಮಗೊಪ್ಪುವ ಹ್ಯಾಂಡ್‌ ಲೂಮ್‌ ಸೀರೆಯನ್ನು ಆಯ್ದುಕೊಳ್ಳಲು, ಕುರ್ತಿಗಳು ಮತ್ತು ಆಭರಣಗಳನ್ನು ಕೊಳ್ಳಲು ಅತ್ಯುತ್ತಮ ಮೇಳ ಇದಾಗಿದೆ ಎಂದು ನಟಿ ಅಶ್ವಿನಿ ರಾವ್ ಹೇಳಿದರು.

ಈ ಮೇಳದಲ್ಲಿ ದೇಶದ ವಿವಿಧ ಭಾಗಗಳ ಕರಕುಶಲಕರ್ಮಿಗಳು ತಯಾರಿಸಿರುವ ತರಹೇವಾರಿ ಕರಕುಶಲ ವಸ್ತುಗಳು, ಆಟಿಕೆಗಳು, ಉಡುಪುಗಳು ಸೇರಿದಂತೆ ರಾಜಧಾನಿ ಬೆಂಗಳೂರಿನ ಜನತೆಗೆ ಮುದ ನೀಡುವಂತಹ ಉತ್ಪನ್ನಗಳು ಒಂದೇ ಸೂರಿನಡಿ ದೊರೆಯಲಿವೆ. ಮನೆಯನ್ನು ಅಲಂಕಾರ ಮಾಡುವ ಉತ್ಪನ್ನಗಳು, ಹ್ಯಾಂಡ್‍ಲೂಂಗಳು, ಕರಕುಶಲ ವಸ್ತುಗಳು, ಬಟ್ಟೆ, ಮರದ ಆಟಿಕೆಗಳು, ಹೆಂಗಳೆಯರ ಆಕರ್ಷಣೆಯ ಆಭರಣಗಳು, ಬೆಡ್ ಲೈನೆನ್, ಕಲಾಕೃತಿಗಳು, ಪೀಠೋಪಕರಣಗಳು, ಮ್ಯಾಟ್‍ಗಳು, ಪಿಂಗಾಣಿ ವಸ್ತುಗಳು ಸೇರಿದಂತೆ ನೂರಾರು ಬಗೆಯ ಉತ್ಪನ್ನಗಳು ಈ ಪ್ರದರ್ಶನದಲ್ಲಿರಲಿವೆ ಎಂದು ಮೇಳದ ಆಯೋಜಕರಾದ ಅಫ್ತಾಬ್‌ ತಿಳಿಸಿದರು.

ಕರ್ನಾಟಕ ಚಿತ್ರಕಲಾ ಪರಿಷತ್‌ ಆವರಣದಲ್ಲಿ ಬೆಳಿಗ್ಗೆ 11 ರಿಂದ ಸಂಜೆ 7 ಗಂಟೆಯವರೆಗೆ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಲಾಗಿದ್ದು ಪ್ರವೇಶ ಉಚಿತವಾಗಿದೆ.

•ಕೋವಿಡ್‌ ಹರಡದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನೂ ಅಳವಡಿಸಲಾಗಿದೆ
•ನವೆಂಬರ್‌ 26 ರಿಂದ ಡಿಸೆಂಬರ್‌ 5 ರವರೆಗೆ ಬೆಳಿಗ್ಗೆ 11 ರಿಂದ ಸಂಜೆ 7 ಗಂಟೆಯವರೆಗೆ ಮೇಳ ನಡೆಯಲಿದೆ

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 96118 35597

A 10-day Artisan Bazaar begins at Karnataka Chitrakala Parishat

ಇದನ್ನೂ ಓದಿ: Billava community : ಬಿಲ್ಲವ ಸಮಾಜದಿಂದ ನ.೨೧ಕ್ಕೆ ಕಲಾಮಂದಿರದಲ್ಲಿ ‘ಸಮಾಜ ಸಮ್ಮಿಲನ’ ಕಾರ್ಯಕ್ರಮ
ಇದನ್ನೂ ಓದಿ: Pradhan Mantri Awas Yojana: ಪ್ರಧಾನಮಂತ್ರಿ ಆವಾಸ್ ಯೋಜನೆ-ನಗರ ಆವೃತ್ತಿ- 3.61 ಲಕ್ಷ ಮನೆ ನಿರ್ಮಾಣ ಕಾಮಗಾರಿಗೆ ಅನುಮತಿ