ಚಿಕ್ಕಮಗಳೂರು: ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ಲೈಂಗಿಕ ಪ್ರಕರಣದ ತನಿಖೆ ದಿಕ್ಕು ತಪ್ಪಿಸಲು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ವ್ಯವಸ್ಥಿತ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಹೆಚ್.ಹೆಚ್ ದೇವರಾಜ್ ಆರೋಪಿಸಿದರು.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ತಮ್ಮ ಕುಟುಂಬದಲ್ಲಿಯೇ ನಡೆದಿರುವ ಹಗರಣದ ಬಗ್ಗೆ ಮಾತನಾಡುತ್ತಿಲ್ಲ ಅದರ ಬದಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಇವರನ್ನು ಗುರಿಯಾಗಿಟ್ಟುಕೊಂಡು ಅಪಪ್ರಚಾರ ಮಾಡುವ ಮೂಲಕ ತನಿಖೆಯ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ದೂರಿದರು.

ಪೆನ್‌ಡ್ರೈವ್ ಹಗರಣ ಬೆಳಕಿಗೆ ಬರುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶೇ? ತನಿಖಾ ತಂಡ ರಚಿಸಿ ಸಮಗ್ರವಾಗಿ ತನಿಖೆ ನಡೆಸುತ್ತಿದ್ದಾರೆ ನಿ?ಕ್ಷವಾಗಿ ತನಿಖೆ ನಡೆಸಿ ವರದಿ ಹೊರಬರುವ ಮುನ್ನವೇ ಕುಮಾರಸ್ವಾಮಿ ಅವರು ಎಸ್‌ಐಟಿ ವಿರುದ್ಧ ಮಾತನಾಡುತ್ತಾ ಸಿಬಿಐ ತನಿಖೆ ಬಗ್ಗೆ ಪ್ರಸ್ತಾಪಿಸುತ್ತಿರುವುದು ಈ ಪ್ರಕರಣದ ತನಿಖೆಯ ದಿಕ್ಕು ತಪ್ಪಿಸುವ ಹುನ್ನಾರ ಎಂದು ಲೇವಡಿ ಮಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗೃಹ ಸಚಿವರು ಹಾಗೂ ಉನ್ನತ ದರ್ಜೆಯ ಹಿರಿಯ ಪೋಲೀಸ್ ಅಧಿಕಾರಿಗಳೊಂದಿಗೆ ನಿರಂತರವಾಗಿ ಉಸ್ತುವಾರಿ ನಿರ್ವಹಿಸಿ ನಿ?ಕ್ಷಪಾತ ಹಾಗೂ ನ್ಯಾಯಯುತವಾದ ತನಿಖೆ ನಡೆಸುತ್ತಿದ್ದಾರೆ. ಅದೇ ರೀತಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ದಕ್ಷ ಹಾಗೂ ಉತ್ತಮವಾದ ಸಂಘಟನಾಕಾರ ಇಡೀ ಒಕ್ಕಲಿಗ ಸಮುದಾಯದ ನಾಯಕರಾಗುತ್ತಾರೆಂಬ ಹತಾಶೆಯಿಂದ ಕುಮಾರಸ್ವಾಮಿಯವರು ಇಲ್ಲಸಲ್ಲದ ಅಪಪ್ರಚಾರ ಮಾಡುತ್ತಿದ್ದಾರೆ. ಈ ಪ್ರಕರಣದಲ್ಲಿ ಯಾವುದೇ ಕಾಂಗ್ರೆಸ್ ಪಕ್ಷದ ನಾಯಕರ ಬಗ್ಗೆ ಹಗುರವಾಗಿ ಮಾತನಾಡಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಪೆನ್‌ಡ್ರೈವ್ ಪ್ರಕರಣ ಹೊರಬರುತ್ತಿದ್ದಂತೆ ಹೆಚ್.ಡಿ ಕುಮಾರಸ್ವಾಮಿ ತಮ್ಮ ಕುಟುಂಬವೇ ಬೇರೆ, ರೇವಣ್ಣನವರ ಕುಟುಂಬವೇ ಬೇರೆ ಎಂಬ ಹೇಳಿಕೆ ನೀಡಿದ್ದರು ಆದರೆ ಈಗ ದೇವೇಗೌಡರ ಮನೆಯಲ್ಲಿ ರೇವಣ್ಣನವರ ಬಂಧನವಾಗಿದೆ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಈಗ ಇಲ್ಲಸಲ್ಲದ ಮಾತುಗಳನ್ನಾಡುತ್ತಿರುವ ಹೆಚ್‌ಡಿಕೆ ಅವರು ಸಾರ್ವಜನಿಕ ಜೀವನದಲ್ಲಿ ಮುಂದುವರೆಯಲು ನಾಲಾಯಕ್ ಆಗಿದ್ದಾರೆ. ಇನ್ನಾದರೂ ಸಾರ್ವಜನಿಕ ಜೀವನದಿಂದ ನಿವೃತ್ತಿ ಹೊಂದಲಿ ಎಂದು ಲೇವಡಿ ಮಾಡಿದರು.

ಹೆಚ್.ಡಿ ಕುಮಾರಸ್ವಾಮಿ ಅವರಿಗೆ ನೈತಿಕತೆ ಇದ್ದರೆ ಪ್ರಜ್ವಲ್‌ನನ್ನು ಕರೆತಂದು ಶರಣಾಗತಿ ಮಾಡಿ ತನಿಖೆಯ ಸತ್ಯಾಸತ್ಯತೆ ಹೊರಬರುವವರೆಗೂ ಬಾಯಿ ಮುಚ್ಚಿ ಕುಳಿತುಕೊಳ್ಳಬೇಕೆಂದರಲ್ಲದೆ ಹಿಂದೂ ಮುಸ್ಲಿಂ ಯುವಕ-ಯುವತಿಯರು ಮಾತನಾಡಿದರೆ ಲವ್ ಜಿಹಾದ್ ಎಂದು ಬೊಬ್ಬೆ ಹೊಡೆಯುತ್ತಿದ್ದ ಬಿಜೆಪಿಯವರು ಈ ಪ್ರಕರಣದಲ್ಲಿ ಯಾಕೆ ಮೌನವಾಗಿದ್ದಾರೆ ಎಂದು ಪ್ರಶ್ನಿಸಿದರು.

ಬಿಜೆಪಿಯವರಿಗೆ ಮಹಿಳೆಯರ ಬಗ್ಗೆ ಗೌರವ ಇದ್ದರೆ ಬೀದಿಗೆ ಬಂದು ಹೋರಾಟ ಮಾಡಲಿ ಎಂದು ಆಗ್ರಹಿಸಿದರು.

HD Kumaraswamy’s attempt to divert the investigation of the sex case