ವಿಧಾನಸಭೆ:  ರಾಜ್ಯ ಸರ್ಕಾರಿ ನೌಕರರಿಗಾಗಿ 7ನೇ ವೇತನ ಆಯೋಗದ ವರದಿ ಜಾರಿಗೆ ಬದ್ಧವಾಗಿದ್ದು, ಮಾಚ್‌ರ್‍ ಒಳಗಾಗಿ ಆಯೋಗದಿಂದ ಮಧ್ಯಂತರ ವರದಿ ಪಡೆದು ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.

ಬಜೆಟ್‌ ಮೇಲಿನ ಚರ್ಚೆಗೆ ಉತ್ತರ ನೀಡಿ ಮಾತನಾಡಿದ ಅವರು, 7ನೇ ವೇತನ ಆಯೋಗ ಜಾರಿ ಕುರಿತು ವರದಿ ನೀಡಲು ನಿವೃತ್ತ ಮುಖ್ಯ ಕಾರ್ಯದರ್ಶಿ ದಿವಾಕರ್‌ರಾವ್‌ ನೇತೃತ್ವದಲ್ಲಿ ಆಯೋಗ ರಚಿಸಲಾಗಿದೆ. ಈ ಆಯೋಗವು ಇನ್ನೂ ವರದಿ ನೀಡದ ಕಾರಣ ಬಜೆಟ್‌ನಲ್ಲಿ ಪ್ರಸ್ತಾಪ ಮಾಡಿಲ್ಲ. ಆಯೋಗದ ಜತೆ ಮಾತನಾಡಿ ಮಾರ್ಚ್‌ ಒಳಗಾಗಿಯೇ ಮಧ್ಯಂತರ ವರದಿ ಪಡೆಯಲಾಗುವುದು. ತನ್ಮೂಲಕ 7ನೇ ವೇತನ ಆಯೋಗ ವರದಿ ಅನುಷ್ಠಾನಗೊಳಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ಕೂಡಲೇ 7ನೇ ವೇತನ ಆಯೋಗ ವರದಿ ಜಾರಿ ಮಾಡದಿದ್ದರೆ ಹೋರಾಟ ನಡೆಸುವುದಾಗಿ ರಾಜ್ಯ ಸರ್ಕಾರಿ ನೌಕರರ ಸಂಘ ಎಚ್ಚರಿಕೆ ನೀಡಿದೆ. ಜತೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸೇರಿದಂತೆ ಹಲವು ಸದಸ್ಯರು ಬಜೆಟ್‌ ಮೇಲಿನ ಉತ್ತರದ ವೇಳೆಯೇ ವೇತನ ಆಯೋಗ ಜಾರಿ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದ್ದರು. ಇದರಂತೆ ಬೊಮ್ಮಾಯಿ ಅವರು ಗುರುವಾರ ಘೋಷಣೆ ಮಾಡಿದ್ದಾರೆ.

Interim Report of the 7th Pay Commission