ಚಿಕ್ಕಮಗಳೂರು:  ಜಿಲ್ಲೆಯ ತಾಲ್ಲೂಕು ಹಾಗೂ ಉಪ ಘಟಕಗಳಲ್ಲಿ ಖಾಲಿ ಇರುವ ೧೯೦ ಸ್ವಯಂ ಸೇವಕ ಗೃಹ ರಕ್ಷಕ ಸದಸ್ಯರನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು

ಅರ್ಜಿಗಳನ್ನು ಸಲ್ಲಿಸಿರುವ ಅಭ್ಯರ್ಥಿಗಳು ಏಪ್ರಿಲ್ 30 ರಂದು ಬೆಳಿಗ್ಗೆ 9 ಗಂಟೆಗೆ ಅಗತ್ಯ ದಾಖಲಾತಿಗಳೊಂದಿಗೆ ನಗರದ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಮೈದಾನದಲ್ಲಿ (ಡಿಎಆರ್) ಸಂದರ್ಶನಕ್ಕೆ ಹಾಜರಾಗಲು ಪ್ರಕಟಣೆ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ಚಿಕ್ಕಮಗಳೂರು ಜಿಲ್ಲಾ ಗೃಹರಕ್ಷಕ ದಳದ ಕಛೇರಿ (ದೂ.ಸಂಖ್ಯೆ : 9448639659, 8151914734) ಸಂಪರ್ಕಿಸಬಹುದಾಗಿದೆ ಎಂದು ಸಮಾದೇಷ್ಟರವರ ಕಾರ್ಯಲಯ ಪ್ರಕಟಣೆಯಲ್ಲಿ ತಿಳಿಸಿದೆ.

Interview for the post of Home Guard on April 30