ಚಿಕ್ಕಮಗಳೂರು: ಒಂದೇ ಪಕ್ಷ, ಒಂದೇ ಅಧಿಕಾರ, ಒಂದೇ ಸಿದ್ದಾಂತ ಇರುವ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿ ಅವರಿಗೆ ಭಾಷೆಯ ಅಡ್ಡಿ ಆಗುವುದಿಲ್ಲ ಎಂದು ಮಾಜಿ ಸಚಿವ ಅರಗ ಜ್ಞಾನೇಂದ್ರ ಹೇಳಿದರು.

ಅವರು ಇಂದು ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಕಾಂಗ್ರೆಸ್ ಅಭ್ಯರ್ಥಿ ಮಾಡಿರುವ ಆರೋಪಕ್ಕೆ ಉತ್ತರಿಸಿ, ಕೋಟಾ ಶ್ರೀನಿವಾಸ್ ಪೂಜಾರಿಗೆ ಇಂಗ್ಲಿ?, ಹಿಂದಿ ಬರಲ್ಲ ಎಂಬುದು ನಿರಾದಾರ ಬದಲಾಗಿ ರಾಷ್ಟ್ರ ಸೇವೆ, ಅಭಿವೃದ್ಧಿ ಮಾಡುವ ಹಂಬಲ ಹೊಂದಿದ್ದಾರೆ ಎಂದು ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಮೋದಿ ಹೆಸರೇಳಿದವರಿಗೆ ಕಪಾಳಕ್ಕೆ ಹೊಡೆಯಿರಿ ಎಂದು ಹೇಳಿಕೆ ನೀಡಿರುವುದನ್ನು ಖಂಡಿಸಿದ ಅವರು ಕೂಡಲೇ ಸಚಿವ ತಂಗಡಿಯನ್ನು ಸಚಿವ ಸಂಪುಟದಿಂದ ಕೈ ಬಿಡಬೇಕೆಂದು ಆಗ್ರಹಿಸಿದರು.

ಈ ಹೇಳಿಕೆ ನೀಡುವ ಮೂಲಕ ಸ್ವತಃ ತಂಗಡಿ ಅವರು ನಿರ್ವಹಿಸುತ್ತಿರುವ ಖಾತೆಯ ವಿರುದ್ದವಾಗಿ ಸಂಸ್ಕೃತಿ ಇಲ್ಲದವರಂತೆ ನಡೆದುಕೊಳ್ಳುತ್ತಿದ್ದಾರೆ, ಸಚಿವನಾಗಿ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಮಾತನಾಡಿರುವುದು ಸಾಮಾನ್ಯ ಜ್ಞಾನ ಇಲ್ಲದವರಂತೆ ವರ್ತಿಸಿದ್ದಾರೆ ಎಂದು ಆರೋಪಿಸಿದರು.

ಕಾಂಗ್ರೆಸ್ ಪಕ್ಷದ ಇತ್ತೀಚಿನ ನಡವಳಿಕೆಗಳನ್ನು ಗಮನಿಸಿದರೆ ಈ ಭಾರಿಯ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ಇಂತಹ ಕೆಳಮಟ್ಟದ ಹೇಳಿಕೆಗಳಲ್ಲಿ ತೊಡಗಿದ್ದಾರೆ ಎಂದು ಟೀಕಿಸಿದರು.

ಕಳೆದ ೧೦ ವ?ಗಳ ಕೇಂದ್ರ ಸರ್ಕಾರದ ನರೇಂದ್ರ ಮೋದಿ ಅವರ ಆಡಳಿತದಲ್ಲಿ ದೇಶವನ್ನು ಪರಿವರ್ತನೆ ಮಾಡಿದ್ದಾರೆ. ಇದನ್ನು ಕಾಂಗ್ರೆಸ್ ಮುಖಂಡರು ಸಹಿಸಿಕೊಳ್ಳುತ್ತಿಲ್ಲ. ಕಾಂಗ್ರೆಸ್ ಪಕ್ಷದ ಯುಪಿಎ ಸರ್ಕಾರದಲ್ಲಿ ಭಿಕ್ಷುಕರ, ಹಾವಾಡಿಗರ ದೇಶವಾಗಿದ್ದ ಭಾರತವನ್ನು ಇಡೀ ಪ್ರಪಂಚ ಆರ್ಥಿಕವಾಗಿ ಸದೃಢಗೊಳಿಸಿ, ೫ನೇ ಸ್ಥಾನದಲ್ಲಿರುವುದನ್ನು ಇತರೆ ರಾಷ್ಟ್ರಗಳು ತಿರುಗಿ ನೋಡುವಂತೆ ಮಾಡಿದ್ದಾರೆ ಎಂದು ಶ್ಲಾಘಿಸಿದರು.

ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ, ರೈಲ್ವೆ, ವಿಮಾನ ನಿಲ್ದಾಣ, ನೀರಾವರಿ ಯೋಜನೆಗಳು, ಸ್ಮಾರ್ಟ್ ಸಿಟಿ, ಸೈನ್ಯ ಬಲವರ್ಧನೆ, ಬೇರೆ ದೇಶಗಳಿಂದ ಸಾಲ ಪಡೆಯದೆ, ಧನ ಸಹಾಯ ಮಾಡಿದ್ದಾರೆ. ಕಳೆದ ೧೦ ವ?ಗಳ ಆಡಳಿತದಲ್ಲಿ ಅಗಾಧವಾದ ಪರಿವರ್ತನೆ ಮಾಡಿರುವುದು ಕಾಂಗ್ರೆಸ್ ಸಹಿಸಿಕೊಳ್ಳುತ್ತಿಲ್ಲವೆಂದು ಲೇವಡಿ ಮಾಡಿದರು.

ಪ್ರಧಾನಿ ನರೇಂದ್ರ ಮೋದಿಯವರ ಗಟ್ಟಿ ಆಡಳಿತವನ್ನು ಸಹಿಸಿಕೊಳ್ಳಲಾಗದ ಕಾಂಗ್ರೆಸ್ ಎಲ್ಲಾ ರಂಗದಲ್ಲಿ ವಿಫಲವಾಗಿದೆ ಎಂದು ದೂರಿದರು.

ಪಾಕಿಸ್ತಾನ ಜಿಂದಾಬಾದ್, ರಾಮೇಶ್ವರಂ ಕೆಫೆ ಬಾಂಬ್ ಪ್ರಕರಣ, ರಾಜ್ಯ ಆರ್ಥಿಕ ದಿವಾಳಿಯಾಗಿದ್ದು, ಇವೆಲ್ಲವನ್ನು ಮರೆಮಾಚಿ ಕೇವಲ ಬಿಜೆಪಿ ವಿರುದ್ಧ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ದೂರಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್ ದೇವರಾಜಶೆಟ್ಟಿ, ನಗರಾಧ್ಯಕ್ಷ ಮಧುಕುಮಾರ್ ರಾಜ್ ಅರಸ್, ವಕ್ತಾರರಾದ ಹೆಚ್.ಎಸ್ ಪುಟ್ಟಸ್ವಾಮಿ, ಸೋಮಶೇಖರ್ ಉಪಸ್ಥಿತರಿದ್ದರು.

Language is not a barrier for BJP candidate