ಚಿಕ್ಕಮಗಳೂರು: ಅನುಮತಿ ಇಲ್ಲದೇ ಮಸೀದಿ, ಚರ್ಚ್, ಪ್ರಾರ್ಥನಾ ಮಂದರಿಗಳಲ್ಲಿ ಧ್ವನಿವರ್ಧಕಗಳ ಬಳಕೆ‌ ಮಾಡುವಂತಿಲ್ಲ ಎಂದು ಚಿಕ್ಕಮಗಳೂರು ನಗರಸಭೆ ನೂತನ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೊಸ ವಿವಾದಗಳು ಸೃಷ್ಟಿಯಾಗುತ್ತಿದ್ದು, ಆ ವಿವಾದಗಳು ಧಾರ್ಮಿಕ ಭಾವನೆಗಳು, ಧಾರ್ಮಿಕ ಕೇಂದ್ರಗಳ ಸುತ್ತವೇ ಗಿರಕಿ ಹೊಡೆಯುತ್ತಿರುವುದು ಮತ್ತೊಂದು ವಿಷಯವಾಗಿದೆ.

ಈ ಹಿಂದೆ ಇಡೀ ರಾಜ್ಯದಲ್ಲಿ ವ್ಯಾಪಕ ಸುದ್ದಿಯಾಗಿದ್ದ ಹಿಜಾಬ್ ವಿವಾದ ಬೆನ್ನಲ್ಲೇ ಜಾತ್ರಗೆಳಲ್ಲಿ ಮುಸ್ಲಿಂ ವರ್ತಕರ ಮೇಲಿನ ನಿಷೇಧ ಭಾರಿ ಚರ್ಚೆಯಾಗುತ್ತಿರುವ ಹೊತ್ತಲ್ಲೇ ಇದೀಗ ಚಿಕ್ಕಮಗಳೂರು ನಗರಸಭೆ ಕೈಗೊಂಡ ಒಂದು ನಿರ್ಧಾರ ಮತ್ತೊಂದು ಚರ್ಚೆಗೆ ಕಾರಣವಾಗಿದೆ.

ಚಿಕ್ಕಮಗಳೂರು ನಗರಸಭೆಯಲ್ಲಿ 37ನೇ ಬಜೆಟ್ ಮಂಡನೆಯಾಗಿದ್ದು, ನಗರಸಭಾ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಅವರು ಚಿಕ್ಕಮಗಳೂರು ನಗರಸಭೆಯ 37ನೇ ಬಜೆಟ್ ಮಂಡನೆ ಮಾಡಿದರು. ಆದರೆ ಬಜೆಟ್ ನಲ್ಲಿ ಘೋಷಣೆ ಮಾಡಿರುವ ಒಂದು ಅಂಶವನ್ನು ಜಾರಿಗೊಳಿಸಿದರೆ ಸಾಕಷ್ಟು ವಿವಾದ ಸೃಷ್ಟಿಯಾಗುವ ಲಕ್ಷಣಗಳು ಕಂಡು ಬಂದಿದೆ.

ನಗರದ ಜನರ ಆರೋಗ್ಯ ದೃಷ್ಟಿಯಿಂದ ಧಾರ್ಮಿಕ ಕೇಂದ್ರಗಳಲ್ಲಿ ಬಳಕೆ ಮಾಡುತ್ತಿರುವ ಅನಧಿಕೃತ ಧ್ವನಿವರ್ಧಕಗಳ ವಿರುದ್ಧ ಬಜೆಟ್ ನಲ್ಲಿ ಸಮರ ಸಾರಲಾಗಿದ್ದು, ಕೋರ್ಟ್ ಆದೇಶವನ್ನು ಧಿಕ್ಕರಿಸಿ ಮಸೀದಿ, ಚರ್ಚ್, ದೇವಸ್ಥಾನಗಳಲ್ಲಿ ಬಳಕೆ ಮಾಡುತ್ತಿರುವ ಮೈಕ್ ಗಳ ವಿರುದ್ಧ ಕ್ರಮ ತೆಗೆದುಕೊಳ್ಳುವ ಆಶ್ವಾಸನೆಯನ್ನು ಆಯವ್ಯಯದಲ್ಲಿ ನೀಡಲಾಗಿದೆ.

ಇನ್ನು ಮುಂದೆ ಚಿಕ್ಕಮಗಳೂರು ನಗರಸಭೆ ವ್ಯಾಪ್ತಿಯಲ್ಲಿ ಕಾರ್ಪೋರೇಷನ್ ಅನುಮತಿ ಇಲ್ಲದೇ ಬೇಕಾಬಿಟ್ಟಿ ಧ್ವನಿವರ್ಧಕಗಳನ್ನು ಬಳಕೆ ಮಾಡುವಂತಿಲ್ಲ ಎಂದು ಹೇಳಲಾಗಿದೆ. ಇದು ದೇವಸ್ಥಾನ, ಮಸೀದಿ ಮತ್ತು ಚರ್ಚೇ ಸೇರಿದಂತೆ ಎಲ್ಲ ಧಾರ್ಮಿಕ ಕೇಂದ್ರಗಳಿಗೂ ಅನ್ವಯವಾಗಲಿದೆ ಎಂದು ಹೇಳಲಾಗಿದೆ.

No use of loudspeakers

ಇದನ್ನೂ ಓದಿ: unconditional-apology: ಸಿದ್ದರಾಮಯ್ಯ ಬೇಷರತ್ ಕ್ಷಮೆ ಯಾಚಿಸಬೇಕು

ಇದನ್ನೂ ಓದಿ: Workout at the gym : ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿರುವಾಗಲೇ ಮಹಿಳೆ ಸಾವು