ಚಿಕ್ಕಮಗಳೂರು: ರಾಜ್ಯ ಸರ್ಕಾರ ಅಸ್ತಿತ್ವಕ್ಕೆ ಬಂದು ಹತ್ತು ತಿಂಗಳು ಕಳೆದಿದ್ದು, ಶಾಸಕ ಎಚ್.ಡಿ.ತಮ್ಮಯ್ಯ ಕ್ಷೇತ್ರದಲ್ಲಿನ ಎಷ್ಟು ರಸ್ತೆಗಳನ್ನು ಅಭಿವೃದ್ದಿಪಡಿಸಿದ್ದಾರೆ ಜತೆಗೆ ಎಷ್ಟು ಅನುದಾನ ತಂದಿದ್ದಾರೆಂದು ಸಾರ್ವಜನಿಕವಾಗಿ ಬಹಿರಂಗಪಡಿಸಬೇಕೆಂದು ಬಿಜೆಪಿ ನಗರ ಮಂಡಲ ವಕ್ತಾರ ಡಿ.ಸುಧೀರ್ ಆಗ್ರಹಿಸಿದ್ದಾರೆ.

ಸೋಮವಾರ ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಕ್ಷೇತ್ರದ ರಸ್ತೆಗಳ ಗುಂಡಿ ಮುಚ್ಚುತ್ತಿಲ್ಲ, ಹೊಸ ರಸ್ತೆಗಳನ್ನು ಮಾಡಿಸಿದ್ದೇ ನೆಂಬ ಶಾಸಕರ ಹೇಳಿಕೆಯನ್ನು ಪ್ರಶ್ನಿಸಿರುವ ಅವರು, ಶಾಸಕರು ಹಿಂದಿನ ಸರ್ಕಾರದಲ್ಲಿ ಆಗಿರುವ ಕೆಲಸಗಳಿಗೆ ಗುದ್ದಲಿಪೂಜೆ, ಉದ್ಘಾಟನೆ ಮಾಡುತ್ತಿದ್ದಾರಷ್ಟೇ ಎಂದು ಚಾಟಿ ಬೀಸಿದರು.

ಮಾಜಿ ಶಾಸಕ ಸಿ.ಟಿ.ರವಿಯವರ ಅವಧಿಯಲ್ಲಿ ಆಗಿರುವ ಅಭಿವೃದ್ದಿ ಕೆಲಸಗಳ ಬಗ್ಗೆ ಸಂಕಲ್ಪ ಸಾಧನೆ ಎಂಬ ಪುಸ್ತಕದಲ್ಲಿ ಸಾರ್ವ ಜನಿಕಗೊಳಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅಭಿವೃದಿ ಕೆಲಸಗಳಿಗೆ ತಡೆಯೊಡ್ಡಿತು. ಆಗ ಶಾಸಕ ಎಚ್.ಡಿ. ತಮ್ಮಯ್ಯ ವಿರೋಧ ಮಾಡಲಿಲ್ಲ. ಶಾಸಕರು ಮಾತಿನಿಂದಲೇ ನಾಯಕರಾಗುತ್ತೇವೆಂದು ಭಾವಿಸಿದಂತೆ ಕಾಣುತ್ತಿದೆ ಎಂದು ಹೇಳಿದರು.

ನಗರಸಭೆ, ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ವರ್ಗಾವಣೆ ದಂಧೆ ನಡೆಯುತ್ತಿರುವ ಬಗ್ಗೆ ಸಾರ್ವಜನಿಕವಾಗಿ ಕೇಳಿ ಬರುತ್ತಿದೆ ಮುಂದಿನ ದಿನಗಳಲ್ಲಿ ದಾಖಲೆ ಸಹಿತ ಸಾರ್ವಜನಿಕಪಡಿಸಲಾಗುವುದು ಎಂದ ಅವರು, ಶಾಸಕ ಎಚ್.ಡಿ.ತಮ್ಮಯ್ಯ ಇಂತಹ ಹೇಳಿಕೆ ಕೊಡು ವುದನ್ನು ನಿಲ್ಲಿಸಿ ಕ್ಷೇತ್ರದ ಅಭಿವೃದ್ದಿಗೆ ಗಮನಹರಿಸಲಿ ಎಂದು ಒತ್ತಾಯಿಸಿದರು.

MLA HD Tammaiah has developed how many roads in the constituency…?