ಬೆಂಗಳೂರು: ಬಹುಭಾಷಾ ನಟಿ, ‘ನ್ಯಾಷನಲ್‌ ಕ್ರಶ್‌’ ರಶ್ಮಿಕಾ ಮಂದಣ್ಣ ಅವರ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸದ್ಯ ಬಹು ಬೇಡಿಕೆಯ ಮತ್ತು ಹೆಚ್ಚು ಸಂಭಾವನೆ ಪಡೆಯುತ್ತಿರುವ ನಟಿಯರಲ್ಲಿ ರಶ್ಮಿಕಾ ಒಬ್ಬರು. ಸಿನಿಪ್ರಿಯರಿಂದ ‘ನ್ಯಾಷನಲ್‌ ಕ್ರಶ್’ ಎಂದು ಕರೆಸಿಕೊಂಡಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ಸದಾ ಸಕ್ರಿಯರಾಗಿರುವ ರಶ್ಮಿಕಾ, ಪ್ರವಾಸ, ಹಬ್ಬ ಸೇರಿದಂತೆ ವಿಶೇಷ ಸಂದರ್ಭಗಳಲ್ಲಿ ಕ್ಲಿಕ್ಕಿಸಿದ ಫೋಟೊಗಳನ್ನು ಅಭಿಮಾನಿಗಳಿಗಾಗಿ ಹಂಚಿಕೊಳ್ಳುತ್ತಿರುತ್ತಾರೆ.

ಮುಂಬೈನಲ್ಲಿ ಇತ್ತೀಚೆಗೆ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಶ್ಮಿಕಾ ಮಂದಣ್ಣ ಭಾಗವಹಿಸಿದ್ದರು. ಈ ವೇಳೆ ರಶ್ಮಿಕಾ ಮಂದಣ್ಣ ಅವರು ಕೆಂಪು ಬಣ್ಣದ ಉಡುಪಿನಲ್ಲಿ ಕಾಣಿಸಿಕೊಂಡಿದ್ದು, ಬೋಲ್ಡ್ ಲುಕ್ನಲ್ಲಿ ಎಲ್ಲರ ಗಮನ ಸೆಳೆದಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.