ಚಿಕ್ಕಮಗಳೂರು: ನಾಲ್ಕು ವರ್ಷಗಳಿಂದ ಪ್ರೀತಿಸಿದ ಯುವತಿಯ ಜೊತೆ ರಾಷ್ಟ್ರೀಯ ಮಟ್ಟದ ಕಬಡ್ಡಿ ಆಟಗಾರ ಇತ್ತೀಚಿಗೆ ಮನೆಯವರ ವಿರೋಧದ ನಡುವೆ ಮದುವೆಯಾಗಿದ್ದ ಆದರೆ ಇವತ್ತು ಮದುವೆಯಾದ ಮೂರೇ ದಿನಕ್ಕೆ ತಾಯ ಜೊತೆ ಹೋಗುತ್ತೇನೆ ಎಂದು ತವರು ಮನೆ ಸೇರಿದಕ್ಕೆ ಮನನೊಂದು ರಾಷ್ಟ್ರಮಟ್ಟದ ಕಬ್ಬಡ್ಡಿ ಆಟಗಾರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.

ಚಿಕ್ಕಮಗಳೂರು ನಗರದ ಹೊರವಲಯದ ತೇಗೂರು ಗ್ರಾಮದ ಮನೆಯಲ್ಲಿ ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ ವಿನೋದ್(24) ಆತ್ಮಹತ್ಯೆ ಮಾಡಿಕೊಂಡಿದ್ದ. ಸೋಮವಾರ ರಾತ್ರಿ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾನೆ. ಪ್ರೀತಿಸಿ ಮದುವೆಯಾದ ಮೂರೇ ದಿನಕ್ಕೆ ಹೆಂಡತಿ ಬಿಟ್ಟು ಹೋದಳೆಂದು ಮನನೊಂದ ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ ವಿನೋದ್ ಮನೆಯಲ್ಲಿ ಯಾರು ಇಲ್ಲದ ವೇಳೆ ಸಮಯ ನೋಡಿಕೊಂಡು ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದು ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.

ತೇಗೂರು ಗ್ರಾಮದ ತನುಜಾ ಎಂಬ ಯುವತಿ ಹಾಗೂ ವಿನೋದ್ ನಾಲ್ಕು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇವರ ಪ್ರೀತಿಗೆ ಯುವತಿ ಮನೆಯವರ ಸಮ್ಮತಿ ಇರಲಿಲ್ಲ. ಹೀಗಾಗಿ ಯುವತಿ ಮನೆಯವರ ವಿರೋಧದ ನಡುವೆಯೇ ಇಬ್ಬರೂ ಓಡಿ ಹೋಗಿ ಮದುವೆಯಾಗಿದ್ದರು. ಡಿಸೆಂಬರ್ 10 ರಂದು ವಿನೋದ್ ಹಾಘೂ ತನುಜಾ ಮದುವೆಯಾಗಿದ್ದರು.

ಇನ್ನೇನು ಪರಸ್ಪರ ಪ್ರೀತಿ ಮಾಡಿದ್ದ ಜೋಡಿ ಹಕ್ಕಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟು ಸಂಸಾರ ಶುರು ಮಾಡುವ ಹೊತ್ತಲ್ಲೇ ಪೊಲೀಸರು ನವ ಜೋಡಿಯನ್ನು ಠಾಣೆಗೆ ಕರೆ ತಂದಿದ್ದರು. ಯುವತಿಯ ಕುಟುಂಬಸ್ಥರ ದೂರಿನ ಮೇರೆಗೆ ಠಾಣೆಯಲ್ಲಿ ಪಂಚಾಯಿತಿ ನಡೆದಿದ್ದು ಯುವತಿ ತನ್ನ ತಾಯಿ ಮನೆಗೆ ಹೋಗುವುದಾಗಿ ಹೇಳಿಕೆ ನೀಡಿದ್ದಾಳೆ. ಮದುವೆಯಾದ ಮೂರೇ ದಿನಕ್ಕೆ ಗಂಡನನ್ನು ಬಿಟ್ಟು ತಾಯಿ ಜೊತೆ ಹೋಗುವುದಾಗಿ ಹೇಳಿ ಯುವತಿ ಉಲ್ಟಾ ಹೊಡೆದಿದ್ದಾಳೆ. ಇದರಿಂದ ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ.

National level kabaddi player commits suicide