ಚಿಕ್ಕಮಗಳೂರು: ಮೋಸ್ಟ್ ವಾಂಟೆಡ್ ಭೂಗತ ನಕ್ಸಲ್ ಅಂಗಡಿಸುರೇಶ್‌ನನ್ನು ಕೇರಳದ ಕಣ್ಣೂರು ಸರ್ಕಾರಿ ಆಸ್ಪತ್ರೆಯಲ್ಲಿ ಬಂಧಿಸಲಾಗಿದೆ.

ಬಂಧಿಸಿರುವ ನಕ್ಸಲ್‌ನನ್ನು ಮೂಡಿಗೆರೆ ತಾಲೂಕಿನ ಅಂಗಡಿ ಗ್ರಾಮದ ಸುರೇಶ್ ಗುರುತಿಸಲಾಗಿದೆ. ಕಣ್ಣೂರು ಅರಣ್ಯದ ನಕ್ಸಲ್ ಕ್ಯಾಂಪ್ ಮೇಲೆ ಕಾಡಾನೆ ದಾಳಿ ನಡೆಸಿತ್ತು. ಕಾಡಾನೆ ದಾಳಿಯಿಂದ ನಕ್ಸಲ್ ಅಂಗಡಿಸುರೇಶ್ ಗಾಯಗೊಂಡಿದ್ದ. ಹೀಗಾಗಿ ಸುರೇಶ್‌ಗೆ ಕಣ್ಣೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ವಿಚಾರ ಇಳಿದು ದಾಳಿ ನಡೆಸಿದ ಪೊಲೀಸರು ಸುರೇಶ್‌ನನ್ನು ಬಂಧಿಸಿದ್ದಾರೆ.

ಮೂಡಿಗೆರೆ ತಾಲೂಕಿನ ಅಂಗಡಿ ಗ್ರಾಮದ ಸುರೇಶ್ ಕಳೆದ ೧೦ ವರ್ಷಗಳಿಂದ ಭೂಗತರಾಗಿ ನಕ್ಸಲ್ ಆಗಿದ್ದಾನೆ. ಪೊಲೀಸ್ ಇಲಾಖೆ, ಸುರೇಶ್ ಮಾಹಿತಿ ನೀಡಿದವರಿಗೆ ೫ ಲಕ್ಷ ಬಹುಮಾನ ಘೋಷಣೆ ಮಾಡಿತ್ತು. ಕೇರಳ ಕರ್ನಾಟಕ ಗಡಿ ಪ್ರದೇಶದ ಅರಣ್ಯದಲ್ಲಿ ಸುರೇಶ್ ಅಡಗಿದ್ದ. ಸುರೇಶ್ ವಿರುದ್ಧ ಚಿಕ್ಕಮಗಳೂರು ಉಡುಪಿಯ ಶಿವಮೊಗ್ಗ ಜಿಲ್ಲೆಯಲ್ಲಿ ಕೇಸ್ ದಾಖಲಾಗಿವೆ. ೧೦ ಕ್ಕೂ ಅಧಿಕ ಪ್ರಕರಣಗಳಲ್ಲಿ ಸುರೇಶ್ ಪೊಲೀಸರಿಗೆ ಬೇಕಾಗಿರುವ ಆರೋಪಿ.

ನಕ್ಸಲರ ಓಡಾಟದ ಮಾಹಿತಿ ಮೇರೆಗೆ ಇತ್ತೀಚಗೆ ಉಡುಪಿ-ಚಿಕ್ಕಮಗಳೂರು ಭಾಗದಲ್ಲಿ ತೀವ್ರ ನಿಗಾ ವಹಿಲಾಗುತ್ತಿದೆ. ಎ.ಎನ್.ಎಫ್. ನಿಂದ ಕೂಂಬಿಂಗ್ ಕಾರ್ಯಾಚರಣೆ ಚುರುಕುಗೊಳಿಸಲಾಗಿದೆ. ಮಲೆನಾಡು-ಕರಾವಳಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲು ನಕ್ಸಲ್ ನಿಗ್ರಹ ದಳಕ್ಕೆ ಈಗಾಗಲೇ ಸೂಚನೆ ನೀಡಲಾಗಿದೆ.

Naxal shopkeeper Suresh arrested in Kerala