ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೇ 10ರಂದು ಬೆಂಗಳೂರು ಮೆಟ್ರೋ ರೈಲು ನಿಗಮ ‘ನಮ್ಮ ಮೆಟ್ರೋ’ ರೈಲು ಸಂಚಾರದ ಅವಧಿಯನ್ನು ಮಧ್ಯರಾತ್ರಿವರೆಗೆ ವಿಸ್ತರಿಸಿದೆ.

ಬೈಯಪ್ಪನಹಳ್ಳಿ, ಕೆಂಗೇರಿ, ನಾಗಸಂದ್ರ ರೇಷ್ಮೆ ಸಂಸ್ಥೆ, ಕೃಷ್ಣರಾಜಪುರ ಮತ್ತು ವೈಟ್‌ಫೀಲ್ಡ್‌ (ಕಾಡುಗೋಡಿ) ನಿಲ್ದಾಣಗಳಿಂದ ಕೊನೆಯ ರೈಲು ಓಡಾಡಲಿವೆ. ಈ ಮಾರ್ಗದ ರೈಲುಗಳು ಮೇ 11ರಂದು ಮಧ್ಯರಾತ್ರಿ 12.5ರವರೆಗೆ ಸಂಚರಿಸಲಿವೆ.

ನಾಡಪ್ರಭು ಕೆಂಪೇಗೌಡ ನಿಲ್ದಾಣ ಮಜೆಸ್ಟಿಕ್‌(Nadaprabhu Kempegowda Station Majestic)ನಿಂದ ಕೊನೆಯ ರೈಲಿನ ಸೇವೆಯು ಮಧ್ಯರಾತ್ರಿ 12.35ಕ್ಕೆ ಬೈಯಪ್ಪನಹಳ್ಳಿ, ಕೆಂಗೇರಿ, ನಾಗಸಂದ್ರ, ರೇಷ್ಮೆ ಸಂಸ್ಥೆಯಿಂದ ಹೊರಡಲಿದೆ ಎಂದು ನಿಗಮ ತಿಳಿಸಿದೆ.

ಮತದಾನ ಸಂಬಂಧ ಪ್ರಯಾಣಿಕರ ಸಂಖ್ಯೆ ಬುಧವಾರ ಎಂದಿಗಿಂತ ಹೆಚ್ಚಿರುವ ಸಾಧ್ಯತೆ ಇದೆ. ಜನತೆಗೆ ಅನುಕೂಲವಾಗಲು ಬಿಎಂಆರ್‌ಸಿಎಲ್‌ ಮೆಟ್ರೋ ರೈಲು ಸೇವೆ ಸಿಗುವಂತೆ ಸಮಯವನ್ನು ವಿಸ್ತರಣೆ ಮಾಡಿದೆ.

Our metro extended train service till midnight on polling day