ಚಿಕ್ಕಮಗಳೂರು: ಸಚಿವ ಶಿವರಾಜ್ ತಂಗಡಗಿ ಹೇಳಿಕೆ ಖಂಡಿಸಿ ಮಂಗಳವಾರ ಬಿಜೆಪಿ ಯುವ ಮೋರ್ಚಾ ನಗರದ ಆದ್ರಿಕಾ ಹೋಟೆಲ್ ಹೊರಗೆ ಪ್ರತಿಭಟನೆ ನಡೆಸಿತು. ನೀತಿ ಸಂಹಿತೆ ಜಾರಿಯಲ್ಲಿ ಇದ್ದರು ಅನುಮತಿ ಇಲ್ಲದೇ ಚಳುವಳಿ ನಡೆಸಿದ ೨೦ ಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಂಧಿಸಲಾಗಿದೆ.

ನಗರದ ಖಾಸಗಿ ಹೋಟೆಲ್ ನಲ್ಲಿ ಉಡುಪಿ ಚಿಕ್ಕಮಗಳೂರು ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಪತ್ರಿಕಾಗೋಷ್ಠಿ ನಡೆಸುತ್ತಿದ್ದ ವೇಳೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ದಿಢೀರ್ ಪ್ರತಿಭಟನೆ ನಡೆಸಿದರು.

ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಮೋದಿ ಹೆಸರು ಹೇಳಿದವರಿಗೆ ಕಪಾಳಕ್ಕೆ ಹೊಡೆಯಿರಿ ಎಂಬ ಹೇಳಿಕೆ ಖಂಡಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಹೋಟೆಲ್ ಹೊರಗೆ ಪ್ರತಿಭಟಿಸಿದರು.

ಜಯಪ್ರಕಾಶ್ ಹೆಗ್ಡೆ ಸಚಿವ ಕೆ.ಜೆ ಜಾರ್ಜ್ ಹೋಟೆಲ್ ಹೊರಗೆ ಆಗಮಿಸುತ್ತಿದ್ದಂತೆ ಮೋದಿ ಮೋದಿ ಎಂದು ಘೋಷಣೆ ಕೂಗಿದರು. ಮೋದಿ ಪೋಸ್ಟರ್ ಹಿಡಿದು ಕಾಂಗ್ರೆಸ್ ವಿರುದ್ಧ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಸಚಿವರಿಗೆ ಬಿಸಿ ಮುಟ್ಟಿಸಲು ಬಂದ ಹಿಂದೂ ಕಾರ್ಯಕರ್ತರು ನಾವು ಏಕೆ ಬಂಧನ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದರು. ಲೋಕಸಭಾ ಚುನಾವಣೆ ನೀತಿ ಸಂಹಿತಿ ಜಾರಿಯಲ್ಲಿ ಇದ್ದರೂ ಪ್ರತಿಭಟನೆ ನಡೆಸಿದ ಕಾರಣಕ್ಕೆ ೨೦ ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.

ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ಜಟಾಪಟಿ ಸಹಾ ನಡೆಯಿತು. ಗಲಾಟೆ ಮಾಡಲು ಬಂದಿಲ್ಲ ಪ್ರತಿಭಟಿಸುತ್ತಿದ್ದೇವೆ ಅಷ್ಟೇ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಈ ಹಿನ್ನೆಲೆ ಕೆ.ಜೆ ಜಾರ್ಜ್, ಜಯಪ್ರಕಾಶ್ ಹೆಗ್ಡೆ, ಸೇರಿದಂತೆ ಜಿಲ್ಲೆಯ ಐವರು ಶಾಸಕರು ಹೋಟೆಲ್ ಹೊರಗೆ ಕೆಲಕಾಲ ಬರಲಿಲ್ಲ.

ಬಿಜೆಪಿ ಯುವ ಮೋರ್ಚಾ ಮುಖಂಡರಾದ ಸಂತೋಷ್‌ಕೋಟ್ಯಯನ್, ಆಲ್ದೂರು ಶಶಿ ಸೇರಿದಂತೆ ಹಲವರು ಇದ್ದರು.

Protest by BJP Yuva Morcha workers condemning Minister Shivraj Tangadagi’s statement