ಉತ್ತರ ಶ್ರೀಲಂಕಾದ ಪೂರ್ವ ಕರಾವಳಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಇದರ ಪರಿಣಾಮ ಕೇರಳ ಕರಾವಳಿಯಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.

ಕಡಲಿನಲ್ಲಿ ಕಾಣಿಸಿಕೊಂಡ ಈ ಬೆಳವಣಿಗೆ ರಾಜ್ಯದಲ್ಲಿ ಹೆಚ್ಚಿನ ಪರಿಣಾಮ ಬೀರದಿದ್ದರೂ ಕಾಸರಗೋಡು, ದಕ್ಷಿಣ ಕನ್ನಡ, ಕೊಡಗು ಭಾಗಗಳಲ್ಲಿ ಇನ್ನೆರಡು ದಿನ ಮಳೆ ವಾತಾವರಣ ಮುಂದುವರಿಯಲಿದೆ.

ಏ. 11ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯಂತೆ ಕೊಡಗು, ಆಗುಂಬೆ, ತೀರ್ಥಹಳ್ಳಿ, ಹೊಸನಗರ ಸುತ್ತಮುತ್ತ ಭಾಗಗಳಲ್ಲಿ ಉತ್ತಮ ಮಳೆ, ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಇನ್ನು ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ.

ರಾಜ್ಯದ ಉಳಿದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

Rain forecast

ಇದನ್ನೂ ಓದಿ: ನಿತ್ಯ ರಾಶಿ ಭವಿಷ್ಯ (10/ 04/ 2022 ಭಾನುವಾರ)

ಇದನ್ನೂ ಓದಿ: Siddaramaiah is responsible for all the untoward incidents : ರಾಜ್ಯದಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳಿಗೆಲ್ಲಾ ಸಿದ್ದರಾಮಯ್ಯ ಕಾರಣ