ತಮಿಳು ನಟ, ಸೂಪರ್ ಸ್ಟಾರ್ ರಜನಿಕಾಂತ್‌ಗೆ ಇಂದು ಹುಟ್ಟುಹಬ್ಬದ ಸಂಭ್ರಮ. 71ನೇ ವಸಂತಕ್ಕೆ ಕಾಲಿಟ್ಟಿರುವ ಅವರಿಗೆ ಈ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಸೇರಿದಂತೆ ಅನೇಕ ಗಣ್ಯರು ಶುಭ ಹಾರೈಸಿದ್ದಾರೆ.

‘ರಜನಿಕಾಂತ್‌ ಜೀ ಅವರಿಗೆ ಜನ್ಮದಿನದ ಶುಭಾಶಯಗಳು. ಅವರು ತಮ್ಮ ಸೃಜನಶೀಲತೆ ಮತ್ತು ಅದ್ಭುತ ನಟನೆಯಿಂದ ಜನರನ್ನು ಪ್ರೇರೇಪಿಸುತ್ತಿರಲಿ. ಭಗವಂತನು ಅವರಿಗೆ ದೀರ್ಘಾಯಸ್ಸು ಮತ್ತು ಆರೋಗ್ಯಕರ ಜೀವನವನ್ನು ದಯಪಾಲಿಸಲಿ’ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ನಿನ್ನಿಂದಲೇ ನನ್ನ ಜೀವನ ಪರಿಪೂರ್ಣ: 4ನೇ ವಿವಾಹ ವಾರ್ಷಿಕೋತ್ಸವದ ಸಂದರ್ಭ ಅನುಷ್ಕಾ ಬಗ್ಗೆ ವಿರಾಟ್ ಮೆಚ್ಚುಗೆ


‘ತಲೈವಾ ರಜನಿಕಾಂತ್ ಸರ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ನಿಮ್ಮ ಜೀವನದಲ್ಲಿ ಸಂತೋಷ ದೊರೆಯಲಿ ಹಾಗೂ ಆರೋಗ್ಯದಿಂದ ಇರಿ ಎಂದು ಸದಾ ಪ್ರಾರ್ಥಿಸುತ್ತಿರುತ್ತೇನೆ’ ಎಂದು ಸಚಿನ್ ತೆಂಡೂಲ್ಕರ್ ಟ್ವೀಟ್ ಮಾಡಿದ್ದಾರೆ.

ಚಿತ್ರರಂಗದ ಅನೇಕ ಗಣ್ಯರೂ ತಲೈವಾಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಟ್ವಟಿರ್, ಇನ್‌ಸ್ಟಾಗ್ರಾಂ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸಾವಿರಾರು ಅಭಿಮಾನಿಗಳು ಶುಭ ಹಾರೈಸಿದ್ದಾರೆ.