ಚಿಕ್ಕಮಗಳೂರು:  ಭಾರತ ಹವಾಮಾನ ಇಲಾಖೆಯು (ಐಎಂಡಿ) ಪ್ರಸಕ್ತ ವರ್ಷದಲ್ಲಿ ಅತಿ ಹೆಚ್ಚು ತಾಪಮಾನ ಕುರಿತು ಹೊರಡಿಸಿದ ಮುನ್ಸೂಚನೆ ಅನ್ವಯ ದೇಶದ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯ ಗರಿಷ್ಠ ತಾಪಮಾನ ಸೂಚಿಸಿದೆ.
ಪ್ರಸ್ತುತ ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಕರಾವಳಿ ಪ್ರದೇಶಗಳ ಕೆಲವು ಭಾಗಗಳಲ್ಲಿ ಸಾಮಾನ್ಯ ತಾಪಮಾನಕ್ಕಿಂತ ೨-೩ ಡಿಗ್ರಿಗಳಷ್ಟು ಅಧಿಕ ತಾಪಮಾನ ದಾಖಲಾಗುತ್ತಿದ್ದು, ಇದು ಮಾನವ ಹಾಗೂ ಪ್ರಾಣಿಗಳ ಆರೋಗ್ಯಕ್ಕೆ ಹಾನಿಕಾರಕವಾಗಿದೆ.
ಕರ್ನಾಟಕದಲ್ಲಿ ಮೇ ೨೦೨೪ರ ಅವಧಿಯವರೆಗೆ ಬಿಸಿ ವಾತಾವರಣವು ಸಾಮಾನ್ಯ ತಾಪಮಾನಕ್ಕಿಂತ ಹೆಚ್ಚಾಗಿರುತ್ತದೆ ಎಂದು ಹವಮಾನ ಇಲಾಖೆ ಸೂಚಿಸಿದೆ. ತಾಪಮಾನದ ಮುನ್ಸೂಚನೆಯ ಹೆಚ್ಚಳವು ರಾಜ್ಯಾದ್ಯಂತ ಸಾಮಾನ್ಯ ಶಾಖದ ಅಲೆಗಳ ದಿನಗಳನ್ನು ೨-೧೪ ದಿನಗಳ ಮೀರುವ ಸಾಧ್ಯತೆ ಇರುತ್ತದೆ.
ಈ ಸಂದರ್ಭದಲ್ಲಿಸಾಧ್ಯವಾದಷ್ಟು ಮಟ್ಟಿಗೆ ವಿಶೇಷವಾಗಿ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸುವುದು (ಮಧ್ಯಾಹ್ನ ೧೨.೦೦ ರಿಂದ ೩.೦೦ ರವರೆಗೆ).
ಕಾಲಕಾಲಕ್ಕೆ ಸಾಕಷ್ಟು ನೀರು ಕುಡಿಯುವುದು. ಹಗುರವಾದ, ತಿಳಿ ಬಣ್ಣದ ಸಡಿಲವಾದ ಮತ್ತು ಹತ್ತಿ ಬಟ್ಟೆಗಳನ್ನು ಧರಿಸುವುದು. ಬಿಸಿಲಿನಲ್ಲಿ ಹೋಗುವಾಗ ರಕ್ಷಣೆಗಾಗಿ ಕನ್ನಡಕಗಳು, ಛತ್ರಿ / ಟೋಪಿ, ಬೂಟುಗಳು ಅಥವಾ ಚಪ್ಪಲಿಗಳನ್ನು ಬಳಸುವುದು. ಹೊರಗಿನ ಉಷ್ಣತೆಯು ಅಧಿಕವಾಗಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸುವುದು (ಮಧ್ಯಾಹ್ನ ೧೨ ರಿಂದ ೩ ಗಂಟೆಯವರೆಗೆ ಹೊರಗೆ ಕೆಲಸ ಮಾಡುವುದನ್ನು).
ಪ್ರಯಾಣ ಮಾಡುವಾಗ, ನೀರನ್ನು ಜೊತೆಯಲ್ಲಿ ಒಯ್ಯುವುದು. ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಕಾರ್ಬೊನೇಟೆಡ್ ತಂಪು ಪಾನೀಯಗಳನ್ನು ತಪ್ಪಿಸುವುದು. ಸಾಧ್ಯವಾದಷ್ಟು ಬಿಸಿ ಆಹಾರವನ್ನು ಸೇವಿಸುವುದು. ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕುಪ್ರಾಣಿಗಳನ್ನು ಬಿಡದಿರುವುದು. ಮೂರ್ಛೆ ಅಥವಾ ಅನಾರೋಗ್ಯ ಅನಿಸಿದರೆ ತಕ್ಷಣ ವೈದ್ಯರನ್ನು ಭೇಟಿ ಮಾಡುವುದು. ನಿಂಬೆ ನೀರು, ಮಜ್ಜಿಗೆ ಮುಂತಾದ ಮನೆಯಲ್ಲಿ ತಯಾರಿಸಿದ ಪಾನೀಯಗಳು ಮತ್ತು ಔಖS ಅನ್ನು ಬಳಸುವುದು.
ಸಾಕುಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ಒದಗಿಸುವುದು. ಮನೆಯನ್ನು ತಂಪಾಗಿರಿಸಲು ಪರದೆಗಳು, ಶಟರ್‌ಗಳು ಅಥವಾ ಸನ್‌ಶೇಡ್‌ಗಳನ್ನು ಬಳಸುವುದು. ಹಾಗೂ ಆಗ್ಗಿಂದಾಗೆ ತಣ್ಣೀರು ಸ್ನಾನ ಮಾಡುವುದು. ಹೊರಗೆ ಹೋಗುವಾಗ ನೀರಿನ ಬಾಟಲಿ, ಛತ್ರಿ / ಟೋಪಿ ಅಥವಾ ಕ್ಯಾಪ್ / ಹೆಡ್ಕವರ್, ಹ್ಯಾಂಡ್ಟವೆಲ್, ಹ್ಯಾಂಡ್ಫ್ಯಾನ್, ಎಲೆಕ್ಟೋಲೈಟ್ / ಗ್ಲೋಕೋಸ್ / ಔಖS ಅನ್ನು ಒಳಗೊಂಡಿರುವ ಅತೀ ಹೆಚ್ಚು ತಾಪಮಾನವನ್ನು (heಚಿಣ ತಿಚಿve) ತಡೆಗಟ್ಟುವ ಕಿಟ್‌ಅನ್ನು ಒಯ್ಯಲು ನಾಗರಿಕರನ್ನು ಪ್ರೋತ್ಸಾಹಿಸುವುದು.
ಅತೀ ಹೆಚ್ಚು ತಾಪಮಾನದಿಂದ (heಚಿಣ ತಿಚಿve) ಸಾಮಾನ್ಯವಾಗಿ ನಿರ್ಜಲೀಕರಣ, ಶಾಖ ಸೆಳೆತ, ಶಾಖದ ಬಳಲಿಕೆ ಅಥವಾ ಶಾಖದ ಅಘಾತದಂತಹ (suಟಿ sಣಡಿoಞe) ಆರೋಗ್ಯದ ದುಷ್ಪರಿಣಾಮಗಳು ಉಂಟಾಗುವ ಸಾಧ್ಯತೆ ಇದೆ. ಅವುಗಳ ರೋಗ ಲಕ್ಷಣಗಳು
ಶಾಖ ಸೆಳೆತಗಳು (ಊeಚಿಣ ಛಿಡಿಚಿmಠಿs): ಎಡೆರ್ನಾ (ಊತ) ಮತ್ತು ಮೂರ್ಛೆ ಸಾಮಾನ್ಯವಾಗಿ ೩೯ಲಿ ಅ ಅಂದರೆ ೧೦೨ಲಿ ಈ ಗಿಂತ ಕಡಿಮೆ ಜ್ವರದಿಂದ ಕೂಡಿರುತ್ತದೆ.
ಶಾಖದ ಬಳಲಿಕೆ: ಆಯಾಸ, ದೌರ್ಬಲ್ಯ, ತಲೆ ತಿರುಗುವಿಕೆ, ತಲೆ ನೋವು, ವಾಕರಿಕೆ, ವಾಂತಿ, ಸ್ನಾಯು ಸೆಳೆತ ಮತ್ತು ಬೆವರುವುದು.
ಶಾಖಾಘಾತ (Suಟಿ Sಣಡಿoಞe): ದೇಹದ ಉಷ್ಣತೆಯು ೪೦ಲಿ ಅ ಅಂದರೆ ೧೦೪ಲಿ ಈ ಅಥವಾ ಅದಕ್ಕಿಂತ ಹೆಚ್ಚಾಗುವುದು ಹಾಗೂ ಉಸಿರಾಟದಲ್ಲಿ ವ್ಯತ್ಯಯ ಮತ್ತು ಪ್ರಜ್ಞೆ ತಪ್ಪುವುದು.
ಅತೀ ಹೆಚ್ಚು ತಾಪಮಾನ (heಚಿಣ ತಿಚಿve) ಕ್ಕೆ ಸಂಬಂಧಿತ ಕಾಯಿಲೆಗೆ ಪ್ರಥಮ ಚಿಕಿತ್ಸೆ:
ಅತೀ ಹೆಚ್ಚು ತಾಪಮಾನದಿಂದ (heಚಿಣ ತಿಚಿve) ತುತ್ತಾದ ವ್ಯಕ್ತಿಯನ್ನು ನೆರಳಿನ ಅಡಿಯಲ್ಲಿ ತಂಪಾದ ಸ್ಥಳಕ್ಕೆ ಸ್ಥಳಾಂತರಿಸುವುದು. ಒದ್ದೆಯಾದ ಬಟ್ಟೆಯಿಂದ ಮೈ ಒರೆಸುವುದು / ತಂಪಾದ ಒದ್ದೆ ಬಟ್ಟೆಯನ್ನು ಹಾಕುವುದು ಹಾಗೂ ದೇಹದ ಉಷ್ಣತೆಯನ್ನು ತಗ್ಗಿಸಲು ತಲೆಯ ಮೇಲೆ ನೀರನ್ನು ಹಾಕುವುದು.
ನೀರು ಅಥವಾ ಪುನರ್ಜಲೀಕರಣ ಪಾನೀಯಗಳಾದ ಓಆರ್‌ಎಸ್. ನಿಂಬೆ ಪಾನಕ ನೀಡುವುದು (ವ್ಯಕ್ತಿ ಇನ್ನೂ ಪ್ರಜ್ಞೆ ಹೊಂದಿದ್ದರೆ)
ವ್ಯಕ್ತಿಗೆ ತಂಪಾದ ಗಾಳಿಯ ವ್ಯವಸ್ಥೆ ಮಾಡುವುದು. ಉತ್ತಮ ಗಾಳಿಗಾಗಿ ಬಟ್ಟೆಗಳನ್ನು ಸಡಿಲಗೊಳಿಸುವುದು.
ರೋಗ ಲಕ್ಷಣಗಳು ಉಲ್ಬಣಗೊಂಡರೆ ಅಥವಾ ದೀರ್ಘಕಾಲದವರೆಗೆ ಇದ್ದರೆ ಅಥವಾ ವ್ಯಕ್ತಿಯು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರೆ ವೈದ್ಯರನ್ನು ಕೂಡಲೇ ಸಂಪರ್ಕಿಸುವುದು. ಮದ್ಯಪಾನ, ಕಾಫಿ, ಶೇಖರಿಸಿದ ಪಾನೀಯವನ್ನು ನೀಡಬಾರದು ಹವಾಮಾನ ಇಲಾಖೆ ನೀಡಿರುವ ಸೂಚನೆಯನ್ನು ಜಿಲ್ಲೆಯ ಜನತೆ ಅನುಸರಿಸುವಂತೆ ಜಿಲ್ಲಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.
Rising summer temperatures – Meteorological Department advises to take precautionary measures