ಚಿಕ್ಕಮಗಳೂರು: ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ನ.೨೬ ರಿಂದ ೨೮ ರವರೆಗೆ ದೇಶದ ಸಂಪತ್ತನ್ನು ರಕ್ಷಿಸಿ, ಜನರ ಬದುಕನ್ನು ಉಳಿಸುವ ಪರ್ಯಾಯ ನೀತಿಗಳಿಗಾಗಿ ಜನತೆಯ ಮಹಾ ಧರಣಿ ಆಯೋಜಿಸಲಾಗಿದೆ.
ಇಂದು ಪತ್ರಿಕಾಗೋಷ್ಠಿಯಲ್ಲಿ ಈ ವಿ?ಯ ತಿಳಿಸಿದ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಗುರುಶಾಂತಪ್ಪ ಸಂಯುಕ್ತ ಕಿಸಾನ್ ಮೋರ್ಚಾ, ರೈತ, ಕಾರ್ಮಿಕ, ಕೂಲಿಕಾರ, ದಲಿv, ವಿದ್ಯಾರ್ಥಿ, ಯುವಜನ, ಮಹಿಳಾ ಸಂಘಟನೆಗಳ ಸಮನ್ವಯ ಸಮಿತಿ ಆಶ್ರಯದಲ್ಲಿ ಈ ಪ್ರತಿಭಟನಾ ಧರಣಿ ನಡೆಯಲಿದ್ದು, ಜಿಲ್ಲೆಯಿಂದ ೫೦೦ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದರು.
ರೈತರ ಉತ್ಪನ್ನಗಳಿಗೆ ಎಂ.ಎಸ್.ವಿ ಸ್ವಾಮಿನಾಥನ್ ಶಿಫಾರಸ್ಸಿನ ಸೂತ್ರ ಸಿ೨+೫೦% ಪ್ರಕಾರ ಕನಿ? ಬೆಂಬಲ ಬೆಲೆ ಹಾಗೂ ಖರೀದಿ ಖಾತ್ರಿ ಒದಗಿಸುವ ಶಾಸನ ಜಾರಿ ಮಾಡಬೇಕು. ರೈತರಿಗೆ ನೀಡುವ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ವಿದ್ಯುತ್‌ಚ್ಛಕ್ತಿ ಮೇಲಿನ ಸಬ್ಸಿಡಿ ಮೊತ್ತ ಹೆಚ್ಚಳವಾಗಬೇಕು. ರೈತರ ಆತ್ಮಹತ್ಯೆ ತಡೆಯಲು ಎಲ್ಲಾ ರೀತಿಯ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ರಾಷ್ಟ್ರೀಯ ಕನಿ? ವೇತನ ಮಾಸಿಕ ೨೬ ಸಾವಿರ ರೂ ನಿಗದಿ, ಸಮಾನ ಕೆಲಸಕ್ಕೆ ಸಮಾನ ವೇತನ ಜಾರಿ, ಖಾಯಂ ಸ್ವರೂಪದ ಕೆಲಸದಲ್ಲಿ ತೊಡಗುವ ಕಾರ್ಮಿಕರ ಖಾಯಂಗೆ ಶಾಸನ ರೂಪಿಸಬೇಕು. ನಾಲ್ಕು ಕಾರ್ಮಿಕ ಸಂಹಿತೆಗಳನ್ನು, ಎಫ್‌ಟಿಇ ಪದ್ಧತಿಯನ್ನು ಹಾಗೂ ಕೆಲಸದ ಅವಧಿಯ ಹೆಚ್ಚಳವನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.
ಕಾರ್ಪೊರೇಟ್ ಪರವಾದ ಪಿಎಂ ಫಸಲ್ ಭೀಮಾ ಯೋಜನೆಯನ್ನು ರದ್ದುಪಡಿಸಿ, ರೈತಸ್ನೇಹಿ ಎಲ್ಲಾ ಬೆಳೆಗಳಿಗೂ ವಿಮೆ ಒದಗಿಸುವ ಸಮಗ್ರ ಸಾರ್ವಜನಿಕ ವಿಮಾ ಯೋಜನೆ ಜಾರಿ ಹಾಗೂ ಸಮಗ್ರ ಸಾಲ ಮನ್ನಾ ಯೋಜನೆ ಜಾರಿಗೆ ತರಬೇಕು ಎಂಬ ಬೇಡಿಕೆಗಳು ಸೇರಿದಂತೆ ಒಟ್ಟು ೨೪ ವಿವಿಧ ಸಮಸ್ಯೆ ಬಗೆಹರಿಸಬೇಕೆಂದು ಹೇಳಿದರು.
ಜಿಲ್ಲೆಯ ಮೂಡಿಗೆರೆ ಮತ್ತು ಕಡೂರು ತಾಲೂಕುಗಳಲ್ಲಿ ನಡೆದಿದೆ ಎನ್ನಲಾದ ಭೂ ಅಕ್ರಮ ಪ್ರಕರಣದ ಆರೋಪಿಗಳನ್ನು ರಾಜಕಾರಣಿಗಳ ಒತ್ತಡಕ್ಕೆ ಮಣಿದು, ರಕ್ಷಿಸಲು ಮುಂದಾಗುತ್ತಿರುವ ಸರ್ಕಾರದ ಕ್ರಮದ ವಿರುದ್ಧ ಕರ್ನಾಟಕ ಭೂ ಕಬಳಕೆ ನಿ?ಧ ವಿಶೇ? ನ್ಯಾಯಾಲಯ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡು ಸಂಬಂಧಪಟ್ಟವರಿಗೆ ನೋಟಿಸ್ ಜಾರಿಮಾಡಿ ತನಿಖೆ ನಡೆಸುತ್ತಿರುವುದನ್ನು ಸ್ವಾಗತಿಸಿದರು.
ರೈತ ಸಂಘದ ಸತತ ಹೋರಾಟದ ಫಲವಾಗಿ ಕಡೂರು ತಹಸಿಲ್ದಾರ್ ಜೆ.ಉಮೇಶ್‌ರವರು ಅಕ್ರಮವೆಸಗಿದ್ದನ್ನು ಪರಿಶೀಲಿಸಿ, ಎಫ್‌ಐಆರ್ ದಾಖಲಿಸಿ ಬಂಧಿಸಲಾಗಿತ್ತು. ಕಡೂರು ತಾಲೂಕು ಉಳ್ಳಿನಾಗರು ಸರ್ವೇ ನಂ.೪೩ರ ೫.೦೪ ಎಕರೆ ಸರ್ಕಾರಿ ಬೀಳು ಜಮೀನಿಗೆ ೩೦ ವ?ದ ಹಿಂದೆ ಮರಣ ಹೊಂದಿದ ವ್ಯಕ್ತಿಗೆ ಖಾತೆ ಮಾಡಿದ ಸಂಬಂಧ ಎಫ್‌ಐಆರ್ ದಾಖಲಿಸಲಾಗಿತ್ತು. ಇದಲ್ಲದೆ ಸುಮಾರು ೩೫೦೦ ಎಕರೆ ಸರ್ಕಾರಿ ಭೂಮಿಯನ್ನು ನಿಯಮ ಮೀರಿ ಪರಬಾರೆ ಮಾಡಿರುವುದು ಉಳ್ಳವರಿಗೆ ಜಮೀನು ಮಂಜೂರು, ಅರಣ್ಯ ಭೂಮಿ, ಅಮೃತ್ ಮಹಲ್ ಕಾವಲು ಗೋಮಾಳ ಭೂಮಿ ಸೇರಿದಂತೆ ಭೂ ಅಕ್ರಮ ವೆಸಗಿರುವ ಬಗ್ಗೆ ವರದಿಯಲ್ಲಿ ತಿಳಿಸಲಾಗಿದೆ ಎಂದರು.
ಮೂಡಿಗೆರೆ ತಾಲೂಕಿನಲ್ಲಿಯೂ ೨೫೦೦ ಎಕರೆ ಪ್ರದೇಶದ ಭೂಮಿ ಹಂಚಿಕೆಯಲ್ಲಿ ಅಕ್ರಮ ಆಗಿರುವುದು ವರದಿಯಿಂದ ತಿಳಿದು ಬಂದಿದೆ. ಬಲಾಢ್ಯರಿಗೆ ಭೂಮಿ ಮಂಜೂರು ಮಾಡುವ ಮೂಲಕ, ಬಡವರು ಮತ್ತು ಭೂ ರಹಿತರಿಗೆ ಭೂಮಿ ಹಂಚಿಕೆಯಲ್ಲಿ ತಾರತಮ್ಯ ಮಾಡಲಾಗಿತ್ತು. ಈ ಅಕ್ರಮಗಳೆಲ್ಲ ಬೆಳಕಿಗೆ ಬಂದಿದ್ದಲ್ಲದೆ ಇಲ್ಲಿ ವಾಸವಿರದ ವಿದೇಶದಲ್ಲಿರುವ ವ್ಯಕ್ತಿಗಳಿಗೂ ಭೂ ಮಂಜೂರಾತಿ ಮಾಡಲಾಗಿದ್ದು, ಈ ಅಕ್ರಮದಲ್ಲಿ ಭಾಗಿಯಾದ ತಹಸಿಲ್ದಾರ್, ಶಿರಸ್ತೆದಾರ್, ರಾಜಸ್ವ ನಿರೀಕ್ಷರ ಮೇಲೆ ಎಫ್‌ಐಆರ್ ದಾಖಲಾಗಿದ್ದರೂ ಇದುವರೆಗೆ ಬಂಧಿಸಿಲ್ಲ ಎಂದು ಆರೋಪಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ,ಮಹೇಶ್, ಮುಖಂಡರುಗಳಾದ ಕೆ.ಟಿ ಆನಂದ್, ಎಂ.ಬಿ ಚಂದ್ರಶೇಖರ್, ಹೆಚ್.ಎಸ್ ಲೋಕೇಶ್, ಬಸವರಾಜ್, ವಿಜಯಕುಮಾರ್ ಉಪಸ್ಥಿತರಿದ್ದರು.
State Farmers Union District President Gurushanthappa press conference