ಚಿಕ್ಕಮಗಳೂರು:  ಸರ್ವವ್ಯಾಪಿ, ಸರ್ವಸ್ಪರ್ಶಿ ವಿಕಸಿತ ಭಾರತ ೨೦೪೭ನೇ ಇಸವಿ ವೇಳೆಗೆ ಒಂದು ಸಮೃದ್ಧ ರಾಷ್ಟ್ರವಾಗಬೇಕು, ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಅಭಿವೃದ್ಧಿ ಫಲದ ಪ್ರಯೋಜನ ದೊರೆಯಬೇಕೆಂದು ಪ್ರಧಾನಿ ನರೇಂದ್ರ ಮೋದಿ ಸಂಕಲ್ಪ ಮಾಡಿದ್ದಾರೆ ಎಂದು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಡಾ|| ನರೇಂದ್ರ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಕೇಂದ್ರ ಸರ್ಕಾರ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಎಸ್.ಸಿ-ಎಸ್.ಟಿ ಸಮುದಾಯದ ಶ್ರೇಯೋಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನದೊಂದಿಗೆ ಶ್ರಮಿಸಿವೆ ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರ ಕಳೆದ ೧೦ ತಿಂಗಳಿನಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಮಾಡಿಲ್ಲ. ಬರಗಾಲದ ಸಂದರ್ಭದಲ್ಲಿ ರೈತರ ಸಂಕ?ಕ್ಕೆ ಸ್ಪಂದಿಸಿಲ್ಲ. ಬಡವರು, ದೀನದಲಿತರ ಬಗ್ಗೆ ಯಾವುದೇ ಯೋಜನೆ ಹಾಕಿಕೊಳ್ಳದ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ ಕುರಿತು ಜನರು ಬೇಸತ್ತಿದ್ದಾರೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿರುವ ಎಲ್ಲಾ ೨೮ ಲೋಕಸಭಾ ಕ್ಷೇತ್ರಗಳನ್ನು ಬಿಜೆಪಿ-ಜೆಡಿಎಸ್ ಗೆಲ್ಲುವಂಥ ವಾತಾವರಣ ನಿರ್ಮಾಣವಾಗಿದೆ ಎಂದರು.

ಸ್ವಾತಂತ್ರ್ಯಾ ನಂತರ ಈ ದೇಶದಲ್ಲಿ ಎಸ್.ಸಿ-ಎಸ್.ಟಿ ಸಮುದಾಯಗಳಿಗೆ ಆರ್ಥಿಕವಾಗಿ, ಔದ್ಯೋಗಿಕವಾಗಿ, ರಾಜಕೀಯವಾಗಿ ಶಕ್ತಿ ಕೊಡುವ ಪ್ರಾಮಾಣಿಕ ಪ್ರಯತ್ನವನ್ನು ಪ್ರಧಾನಿ ನರೇಂದ್ರ ಮೋದಿ ಮಾಡಿದ್ದಾರೆ. ಸ್ವಾತಂತ್ರ್ಯ ಬಂದು ೬೦-೬೫ ವ?ಗಳ ಕಾಲ ರಾಜ್ಯ ಮತ್ತು ದೇಶದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರ ಪಡೆದಿದೆ. ಕೇವಲ ಚುನಾವಣೆ ಬಂದ ಸಂದರ್ಭದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಹೆಸರನ್ನು ಹೇಳುವ ಕಾಂಗ್ರೆಸ್ ಪಕ್ಷವು, ದೇಶ-ರಾಜ್ಯದಲ್ಲಿ ತುಳಿತಕ್ಕೆ ಒಳಗಾದ ಸಮಾಜಗಳಿಗೆ ಯಾವುದೇ ರೀತಿಯ ನ್ಯಾಯ ಕೊಡುವ ಕೆಲಸ ಮಾಡಿಲ್ಲ ಎಂದು ಆರೋಪಿಸಿದರು.

ಅಂಬೇಡ್ಕರ್ ಬಗ್ಗೆ ಅಭಿಮಾನವಿಟ್ಟು, ಸಂವಿಧಾನವನ್ನು ಎತ್ತಿ ಹಿಡಿಯುವ ಕೆಲಸ ಮಾಡುತ್ತಿರುವ ಬಿಜೆಪಿ ಪಕ್ಷ. ಸಂವಿಧಾನವನ್ನ ಉಲ್ಲಂಘಿಸಿ, ಅಂಬೇಡ್ಕರ್ ಅವರಿಗೆ ಮಸಿ ಬಳಿಯುವ ಕೆಲಸ ಮಾಡಿರುವುದು ಕಾಂಗ್ರೆಸ್ ಕುಟುಂಬ ಎಂದು ದೂರಿದರು. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಮುಖಂಡರಾದ ಸಿ.ಹೆಚ್ ಲೋಕೇಶ್, ಡಾ|| ಶಿವಪ್ರಸಾದ್, ಸೀತಾರಾಮ್‌ಭರಣ್ಯ, ಜೆಡಿಎಸ್ ನಗರಸಭೆ ಸದಸ್ಯ ಎ.ಸಿ ಕುಮಾರ್‌ಗೌಡ ಉಪಸ್ಥಿತರಿದ್ದರು.

Support BJP for a developed India