ಬೆಂಗಳೂರು: ಮೆಟ್ರೋ ರೈಲು ನಿಗಮ ಶನಿವಾರ ರಾತ್ರಿ 9 -30 ಗಂಟೆಯಿಂದ ನೇರಳೆ ಮಾರ್ಗದ ಎಂಜಿ ರಸ್ತೆ ನಿಲ್ದಾಣದಿಂದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೂ ರೈಲು ಸೇವೆಯನ್ನು ಸ್ಥಗಿತಗೊಳಿಸಲಿದೆ.

ಎಂಜಿ ರಸ್ತೆ ಮತ್ತು ಟ್ರಿನಿಟಿ ಮೆಟ್ರೋ ನಿಲ್ದಾಣಗಳ ನಡುವೆ ನಿರ್ವಹಣೆ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಎಂಜಿ ರಸ್ತೆ ಮೆಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೂ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಈ ಅವಧಿಯಲ್ಲಿ ಎಂಜಿ ರಸ್ತೆ ಮತ್ತು ಕೆಂಗೇರಿ ಮೆಟ್ರೋ ನಿಲ್ದಾಣಗಲ ನಡುವೆ ಸೇವೆ ಲಭ್ಯವಿರಲಿದೆ ಎಂದು ಬಿಎಂಆರ್ ಸಿಎಲ್ ತಿಳಿಸಿದೆ.

ಕೆಂಗೇರಿ ಮೆಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿ ಕಡೆಗೆ ಕೊನೆಯ ರೈಲು ರಾತ್ರಿ 8-40 ಗಂಟೆಗೆ ಹೊರಡುತ್ತದೆ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಿಂದ ಕೆಂಗೇರಿ ಕಡೆಗೆ ರಾತ್ರಿ 9-10 ಗಂಟೆಗೆ ಹೊರಡುತ್ತದೆ. ಕೆಂಪೇಗೌಡ ಮೆಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿಗೆ ಕೊನೆಯ ರೈಲು ಕೆಂಪೇಗೌಡ ಮೆಟ್ರೋ ನಿಲ್ದಾಣದಿಂದ ರಾತ್ರಿ 9-10 ಗಂಟೆಗೆ ಹೊರಡಲಿದೆ. ಈ ಅವಧಿ ನಂತರ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದಿಂದ ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣದವರೆಗೂ ಮೆಟ್ರೋ ರೈಲುಗಳ ಸೇವೆ ಇರಲಿದೆ.

ಹಸಿರು ಮಾರ್ಗದ ಮೆಟ್ರೋ ರೈಲು ಸೇವೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಭಾನುವಾರದಂದು ನೇರಳೆ ಮಾರ್ಗದಲ್ಲಿ ಬೆಳಗ್ಗೆ 7 ಗಂಟೆಯಿಂದ ಮೆಟ್ರೋ ರೈಲು ಸೇವೆ ಪುನರಾರಂಭವಾಗಲಿದೆ ಎಂದು ಬಿಎಂಆರ್ ಸಿಎಲ್ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Temporary suspension of metro rail traffic

ಇದನ್ನೂ ಓದಿ: e Paper – May 28 – 2022

ಇದನ್ನೂ ಓದಿ: ಕಳವು ಮಾಲು ದುರ್ಬಳಕೆ: ಪಿಎಸ್ಐ, ಪಿಸಿ ವಜಾ