ಚಿಕ್ಕಮಗಳೂರು: ಕರ್ನಾಟಕದಲ್ಲಿ ಮೊದಲನೇ ಹಂತದಲ್ಲಿ ಏ.೨೬ರಂದು ನಡೆಯಲಿರುವ ಲೋಕಸಭಾ ಚುನಾವಣೆಗೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಕೇಂದ್ರ ಚುನಾವಣಾ ಆಯೋಗದ ಮಾರ್ಗದರ್ಶನದಂತೆ ಮುಕ್ತ ಹಾಗೂ ವ್ಯವಸ್ಥಿತವಾಗಿ ಮತದಾನ ನಡೆಸಲು ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಂಡಿದೆ.

ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕರೆಯಲಾಗಿದ್ದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್ ಅವರು ಸಿದ್ಧತೆಗಳ ಮಾಹಿತಿ ನೀಡಿದರು.

ಈ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರ ಮತ್ತು ಹಾಸನ ಲೋಕಸಭಾ ಕ್ಷೇತ್ರಕ್ಕೆ ಒಳಪಡುವ ಕಡೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು ೧೨೨೯ ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು ಪ್ರತಿ ಮತಗಟ್ಟೆಗೆ ಶೇ.೧೨೫ರಂತೆ ವಿದ್ಯುನ್ಮಾನ ಮತ ಯಂತ್ರಗಳನ್ನು ಮತ್ತು ಅದಕ್ಕೆ ಶೇ.೧೧೫ ರ? ವಿ.ವಿ ಪ್ಯಾಟ್‌ಗಳನ್ನು ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದರು.

ಮತದಾನ ಕೇಂದ್ರಗಳಲ್ಲಿ ಕರ್ತವ್ಯ ನಿರ್ವಹಿಸಲು ೫೪೦೦ ಸಿಬ್ಬಂದಿಗಳನ್ನು ನಿಯೋಜನೆಗೆ ಮಾಡಲಾಗಿದ್ದು ಈಗಾಗಲೇ ೨ ಸುತ್ತು ತರಬೇತಿ ನೀಡಲಾಗಿದ್ದು ನಾಳೆ ೩ನೇ ಸುತ್ತಿನ ತರಬೇತಿ ನೀಡುವ ಮೂಲಕ ಮತಗಟ್ಟೆ ಅಧಿಕಾರಿಗಳಿಗೆ ಉಸ್ತುವಾರಿ ನೀಡಲಾಗಿದೆ ಎಂದು ಹೇಳಿದರು.

ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಒಬ್ಬರು ಸಹಾಯಕ ಚುನಾವಣಾಧಿಕಾರಿಗಳನ್ನು ನಿಯೋಜಿಸಲಾಗಿದ್ದು ಊಟ ತಿಂಡಿ ಹಾಗೂ ಮತಯಂತ್ರಗಳ ಸರಬರಾಜಿಗೆ ಸಕಲ ವ್ಯವಸ್ಥೆ ಮಾಡಲಾಗಿದೆ. ಎಲ್ಲಾ ಮತಗಟ್ಟೆಗಳಲ್ಲಿ ಕುಡಿಯುವ ನೀರು ವಿದ್ಯುತ್ ಸೇರಿದಂತೆ ಮೂಲ ಸೌಕರ್ಯಗಳ ಜೊತೆಗೆ ಪ್ರತಿ ಮತಗಟ್ಟೆಗೆ ಆರೋಗ್ಯ ಕಿಟ್ ನೀಡಲಾಗಿದ್ದು ಮತಗಟ್ಟೆ ಸಿಬ್ಬಂದಿ ಅಥವಾ ಮತದಾರರಿಗೆ ಯಾವುದೇ ತೊಂದರೆ ಆಗದಂತೆ ಮುಂಜಾಗ್ರತಾ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.

ಈ ಭಾರಿ ತಾಪಮಾನ ಹೆಚ್ಚಾಗಿರುವುದರಿಂದ ಕಡೂರು ವಿಧಾನಸಭಾ ಕ್ಷೇತ್ರದಲ್ಲಿ ೩೫ ಹಾಗೂ ತರೀಕೆರೆ ಕ್ಷೇತ್ರದಲ್ಲಿ ೪೦ ಹೆಚ್ಚುವರಿ ಕೊಠಡಿಗಳನ್ನು ಕಾಯ್ದಿಸಿಕೊಳ್ಳಲಾಗಿದೆ. ಮಲೆನಾಡು ಭಾಗದಲ್ಲಿ ಮಳೆಸೂಚನೆ ಇರುವುದರಿಂದ ಪರಿಸ್ಥಿತಿಗನುಗುಣವಾಗಿ ಹೆಚ್ಚುವರಿ ಕೊಠಡಿ ಹಾಗೂ ಟೆಂಟ್ ನಿರ್ಮಾಣಕ್ಕೆ ವ್ಯವಸ್ಥೆ ಮಾಡಿಕೊಂಡಿದ್ದು ಆಂಬುಲೆನ್ಸ್ ಸೇರಿದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವಿವರಿಸಿದರು.

ಚುನಾವಣಾ ಆಯೋಗದ ನಿರ್ದೇಶನದಂತೆ ಒಟ್ಟು ೧೨೨೪ ಮತಗಟ್ಟೆಗಳಲ್ಲಿ ಶೇ.೬೦ರ? ಮತ ಕೇಂದ್ರಗಳಿಗೆ ವೆಬ್‌ಕ್ಯಾಸ್ಟಿಂಗ್ ಮೂಲಕ ನೇರ ಪ್ರಸಾರದ ವ್ಯವಸ್ಥೆ ಮಾಡಲಾಗಿದೆ. ವಿದ್ಯುತ್ ಹಾಗೂ ಇಂಟರ್‌ನೆಟ್ ವ್ಯವಸ್ಥೆ ಇಲ್ಲದ ೧೮ ಮತಗಟ್ಟೆಗಳಿಗೆ ಮೈಕ್ರೋ ವೀಕ್ಷಕರುಗಳ ಮೂಲಕ ಮಾಹಿತಿ ಪಡೆಯುವ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದರು.

ಚುನಾವಣೆಯಲ್ಲಿ ಅಕ್ರಮ ನಡೆಯದಂತೆ ಜಿಲ್ಲಾಡಳಿತ ಅಗತ್ಯ ಗಟ್ಟಿ ಕ್ರಮಕೈಗೊಂಡಿದ್ದು ವಿವಿಧ ತನಿಖಾಠಾಣೆಗಳಲ್ಲಿ ೩೬೧೫೫೦೨ ಲಕ್ಷ ರೂ ನಗದು, ೧೩೯೫೨೩೦೦೦ ರೂ ಬೆಲೆಯ ಚಿನ್ನಾಭರಣ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದು ೪೬೦ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದರು.

ಚುನಾವಣೆಗೆ ನಿಯೋಜನೆಗೊಂಡಿರುವ ಸಿಬ್ಬಂದಿಯರಿಗೆ ಹಾಗೂ ಸಿಬ್ಬಂದಿಗಳಿಗೆ ಅಂಚೆ ಮೂಲಕ ಮತದಾನ ಮಾಡಲು ಅವಕಾಶ ಅವಕಾಶ ಕಲ್ಪಿಸಿದ್ದು ಶೇ.೨೪ ರ? ಮತದಾನವಾಗಿದೆ ಎಂದು ಹೇಳಿದರು.

ಜಿಲ್ಲಾ ಸ್ವೀಪ್ ಅಧ್ಯಕ್ಷ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ|| ಬಿ. ಗೋಪಾಲಕೃ? ಮಾಹಿತಿ ನೀಡಿ ಹಿಂದಿನ ಲೋಕಸಭಾ ಚುನಾವಣೆಗೆ ಶೇ. ೭೫ರ? ಪ್ರಮಾಣದಲ್ಲಿ ಮತದಾನವಾಗಿದ್ದು ಕಡಿಮೆ ಪ್ರಮಾಣದಲ್ಲಿ ಮತದಾನವಾಗಿರುವ ಸ್ಥಳಗಳಲ್ಲಿ ಕಾರಣ ತಿಳಿದುಕೊಂಡು ಮತದಾನದ ಪ್ರಮಾಣ ಹೆಚ್ಚಿಸುವ ಸಲುವಾಗಿ ಸಾಕ? ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗಿದ್ದು ಶೇ.೭೮ ರಿಂದ ೮೦ ರ? ಪ್ರಮಾಣದಲ್ಲಿ ಮತದಾನವಾಗುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ಗ್ರಾಮೀಣ ಪ್ರದೇಶದಲ್ಲಿ ಮತದಾನ ಹೆಚ್ಚಿಸುವ ಸಲುವಾಗಿ ಆಯಾ ಸ್ಥಳಗಳ ಐತಿಹಾಸಿಕ ಆಕ?ಣೆಯೊಂದಿಗೆ ಮತಗಟ್ಟೆ ಸ್ಥಾಪಿಸಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಕನಿ? ೫ರಂತೆ ಸಖೀ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ವಯೋ ವೃದ್ಧರು ಹಾಗೂ ಅಂಗವಿಕಲರು ಮತಗಟ್ಟೆಗೆ ಬಂದು ಮತ ಚಲಾಯಿಸಿ ಹೋಗಲು ಅನುಕೂಲವಾಗುವಂತೆ ವಾಹನದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದರು.

ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಡಾ|| ವಿಕ್ರಮ ಅಮಟೆ ಮಾತನಾಡಿ ಹಾಸನ ಲೋಕಸಭಾ ಕ್ಷೇತ್ರಕ್ಕೆ ಒಳಪಡುವ ಕಡೂರು ವಿಧಾನಸಭಾ ಕ್ಷೇತ್ರ ಮತ್ತು ಜಿಲ್ಲೆಯಲ್ಲಿ ಬರುವ ಒಟ್ಟು ೧೨೨೯ ಮತಗಟ್ಟೆಗಳಿಗೆ ಚುನಾವಣಾ ಆಯೋಗದ ನಿರ್ದೇಶನದಂತೆ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಹೇಳಿದರು.

ಸೂಕ್ಷ್ಮ-ಅತಿಸೂಕ್ಷ್ಮ ಸಾಮಾನ್ಯ ಮತಗಟ್ಟೆಗಳನ್ನು ಗುರುತಿಸಲಾಗಿದ್ದು ಸೂಕ್ತ ಬಂದೋಬಸ್ತ್‌ಗಾಗಿ ಕೇಂದ್ರ ಮೀಸಲು ಪಡೆಯ ೨ ತಂಡ, ಕೇಂದ್ರ ಮಹಿಳಾ ಮೀಸಲು ಪಡೆಯ ೧ ತಂಡ, ೮ ತುಕಡಿ ಕೆಎಸ್‌ಆರ್‌ಪಿ ಪಡೆ ಸೇರಿದಂತೆ ೨,೦೦೦ಕ್ಕೂ ಹೆಚ್ಚು ರಕ್ಷಣಾ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯ ಕೆಲವು ಭಾಗಗಳಲ್ಲಿ ಕಾಡಾನೆ ಹಾವಳಿ ಇರುವ ಪ್ರದೇಶಗಳಲ್ಲಿ ವಿಶೇ?ವಾಗಿ ಪರಿಗಣಿಸಿ ಅರಣ್ಯ ಇಲಾಖೆ ಸಿಬ್ಬಂದಿಯವರನ್ನು ನೇಮಿಸಲಾಗಿದೆ. ಗೃಹರಕ್ಷಕರ ನೆರವು ಪಡೆಯಲಾಗಿದ್ದು ಯಾರಿಗೂ ತೊಂದರೆ ಆಗದಂತೆ ಊಟ ವಸತಿ ಸೌಲಭ್ಯ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಮತದಾನವಾದ ನಂತರ ಮತ ಚಲಾಯಿಸಲ್ಪಟ್ಟ ವಿದ್ಯುನ್ಮಾನ ಮತಯಂತ್ರಗಳನ್ನು ಕಂಟೇನರ್ ಮೂಲಕ ಬೆಂಗಾವಲು ಪಡೆಯೊಂದಿಗೆ ಕೊಪ್ಪದವರೆಗೆ ಸಾಗಿಸಿ ಅಲ್ಲಿಂದ ಉಡುಪಿಯ ಸ್ಟ್ರಾಂಗ್ ರೂಂಗೆ ಸಾಗಿಸಲಾಗುವುದೆಂದು ಹೇಳಿದರು.

ಒಟ್ಟಾರೆ ಶಾಂತಿ ಸುವ್ಯವಸ್ಥೆಯಿಂದ ಮತದಾನ ನಡೆಸಲು ಜಿಲ್ಲಾಡಳಿತದೊಂದಿಗೆ ಎಲ್ಲಾ ಅಗತ್ಯ ಕ್ರಮಗಳನ್ನು ಪೊಲೀಸ್ ಇಲಾಖೆ ಕೈಗೊಂಡಿದೆ ಎಂದು ತಿಳಿಸಿದರು.

The district administration is fully prepared to conduct free and systematic voting