ಚಿಕ್ಕಮಗಳೂರು: ದೇಶ ಹಾಗೂ ಸಂವಿಧಾನದ ರಕ್ಷಣೆಗಾಗಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಮತ್ತು ರಾಜ್ಯದಲ್ಲಿ ಅತಿ ಹೆಚ್ಚು ಮತದಾನ ಮಾಡಬೇಕೆಂದು ಗುರಿ ಹೊಂದಲಾಗಿದೆ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸ್ವೀಟ್ ಸಮಿತಿ ಅಧ್ಯಕ್ಷ ಡಾ. ಬಿ. ಗೋಪಾಲಕೃಷ್ಣ ಮತದಾರರಲ್ಲಿ ಮನವಿ ಮಾಡಿದರು.

ಅವರು ಇಂದು ಮತದಾನ ಜಾಗೃತಿ ಸಮಿತಿ ಮತ್ತು ಕೃಷಿ ಹಾಗೂ ತೋಟಗಾರಿಕೆ ಇಲಾಖೆ ವತಿಯಿಂದ ಆಯೋಜಿಸಿದ್ದ ಗೋಡೆ ಬರಹ, ಟ್ರ್ಯಾಕ್ಟರ್, ಬೈಕ್ ಜಾಥ ಮತ್ತು ರಂಗೋಲಿ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದರು.

ಈ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದವರಿಗೆ ಸೂಕ್ತ ಬಹುಮಾನವನ್ನು ನೀಡಲಾಗುವುದು ಶೇ ೮೫ರ? ಮತದಾನ ಮಾಡಲು ಗುರಿ ಹೊಂದಿದ್ದು ಏ.೨೬ ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಿ ಅವರು ತಮ್ಮ ಕರ್ತವ್ಯ ನಿರ್ವಹಿಸುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಪ್ರಜಾಪ್ರಭುತ್ವದ ಈ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲು ಮತದಾರರು ಸಹಕರಿಸಬೇಕು ಆ ಮೂಲಕ ದೇಶದ ಅಭಿವೃದ್ಧಿಗೆ ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕೆಂದು ವಿನಂತಿಸಿದರು.

ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಸುಮಾರು ೩೧೭ ಹಳ್ಳಿಗಳನ್ನು ಗುರುತಿಸಿದ್ದು ನಿರೀಕ್ಷಿಸಿದಂತೆ ಸಮಸ್ಯೆ ಆಗುತ್ತಿದ್ದು ಇದಕ್ಕೆ ಸಂಪೂರ್ಣವಾಗಿ ಸಿದ್ಧತೆ ಮಾಡಿಕೊಂಡು ಟ್ಯಾಕ್ಟರ್ ಮೂಲಕ ಕುಡಿಯುವ ನೀರಿನ ಸರಬರಾಜು ಮಾಡುತ್ತಿದ್ದೇವೆಂದು ಹೇಳಿದರು.

ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕರಾದ ಸುಜಾತ ಮಾತನಾಡಿ ಲೋಕಸಭಾ ಸಾರ್ವತ್ರಿಕ ಚುನಾವಣೆ ೨೦೨೪ರ ಅಂಗವಾಗಿ ಕೃಷಿ-ತೋಟಗಾರಿಕೆ ಇಲಾಖೆ ವತಿಯಿಂದ ಟ್ರ್ಯಾಕ್ಟರ್ ಜಾಥ ಏರ್ಪಡಿದ್ದು ಜಿಲ್ಲೆಯಲ್ಲಿ ಅತಿ ಹೆಚ್ಚು ಮತದಾನವಾಗಬೇಕೆಂಬ ಉದ್ದೇಶ ಹೊಂದಾಗಿದೆ ಎಂದರು.

ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಪೂರ್ಣಿಮಾ ಉಪಸ್ಥಿತರಿದ್ದು ಮತದಾನ ಜಾಗೃತಿ ಬಗ್ಗೆ ಮಾತನಾಡಿದರು.

Tractor-Bike Jatha for voting awareness