ಬೆಂಗಳೂರು : ಕರ್ನಾಟಕದಲ್ಲಿ ಇನ್ಮುಂದೆ ಯುಗಾದಿಯನ್ನು ( Ugadi 2022) ‘ಧಾರ್ಮಿಕ ದಿನ’ವನ್ನಾಗಿ ಆಚರಣೆ ಮಾಡಲು ರಾಜ್ಯ ಸರ್ಕಾರದಿಂದ ಆದೇಶವನ್ನು ಹೊರಡಿಸಲಾಗಿದ್ದು, ಕೊಳಗೇರಿ ಮತ್ತು ಹಿಂದುಳಿದ ಪ್ರದೇಶದ ಜನತೆಗೆ ಬೇವು-ಬೆಲ್ಲ ಮತ್ತು ಪ್ರಸಾದವನ್ನು ವಿತರಿಸಬೇಕು ಎಂದು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ಸಾರ್ವಜನಿಕರ ಸಹಭಾಗಿತ್ವದಲ್ಲಿ ವಿಶೇಷವಾಗಿ ಧಾರ್ಮಿಕ ದಿನವನ್ನು ಆಚರಿಸಬೇಕು. ಧಾರ್ಮಿಕ ದಿನವನ್ನು ಆಯಾ ದೇವಸ್ಥಾನಗಳ ವ್ಯಾಪ್ತಿಯಲ್ಲಿ ಸಾರ್ವಜನಿಕರ ಸಹಭಾಗಿತ್ವದಲ್ಲಿ ವಿಶೇಷವಾಗಿ ಅಚರಿಸಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನಾಳೆ ನಡೆಯುವ ಧಾರ್ಮಿಕ ದಿನದ ಪ್ರಯುಕ್ತ ರಾಜ್ಯದ ಪ್ರತಿ ಜಿಲ್ಲೆಯ ಮೂರು ಪ್ರಮುಖ ದೇವಾಲಯಗಳಲ್ಲಿ ಬೆಳಗ್ಗೆ, ಮಧ್ಯಾಹ್ನ ಮತ್ತು ಸಂಜೆಯ ಕಾರ್ಯಕ್ರಮಗಳನ್ನು ನಡೆಸಿಕೊಡುವ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಬೇಕು ಎಂದರು.

Ugadi 2022