ಹುಬ್ಬಳ್ಳಿ: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅವರು ರಾಜ್ಯದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ.

ಕರ್ನಾಟಕ ಚುನಾವಣೆ ಹಿನ್ನೆಲೆ ಹುಬ್ಬಳ್ಳಿಯಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಸೋನಿಯಾ ಗಾಂಧಿ ಅವರು, ಬಿಜೆಪಿ ಅಹಂಕಾರಿ ಪಕ್ಷ. ಹೀಗಾಗಿ ಕಾಂಗ್ರೆಸ್ ಗೆ ಅಧಿಕಾರ ನೀಡಿ ನಿಮಗೆ ನೀಡಿರುವ ಗ್ಯಾರಂಟಿಗಳನ್ನು ಪೂರೈಸುತ್ತೇವೆ ಎಂದು ಹೇಳಿದ್ದಾರೆ.

ಇದೇ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಬಿಜೆಪಿಯು 40 ಪರ್ಸೆಂಟ್ ಕಮಿಷನ್ ಸರ್ಕಾರವಾಗಿದೆ. ಇನ್ನು ಕೇಂದ್ರದಲ್ಲಿ ಕೇಂದ್ರೀಯ ಸಂಸ್ಥೆಗಳನ್ನು ‘ದುರುಪಯೋಗ’ ಮಾಡುತ್ತಿದೆ ಎಂದು ಆರೋಪಿಸಿದರು. ಕರಾಳ ಆಡಳಿತದ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಧ್ವನಿಯನ್ನು ಬಲಪಡಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದರು.

ದೇಶದ ನಾಯಕ ಎನಿಸಿಕೊಂಡವರು ಯಾವ ಪ್ರಶ್ನೆಗಳಿಗೂ ಉತ್ತರ ನೀಡುವುದಿಲ್ಲ, ಯಾವುದಕ್ಕೂ ಅವರು ಉತ್ತರದಾಯಿಗಳಲ್ಲ. ನಮಗೆ ಇಂತಹ ಸರ್ಕಾರ ಏಕೆ ಬೇಕು? ಎಂದು ಪ್ರಶ್ನಿಸಿದರು. ಕರ್ನಾಟಕದ ಜನರು ಸ್ವಾಭಿಮಾನಿಗಳಾಗಿದ್ದಾರೆ. ರಾಜ್ಯದ ಜನ ಭಯಪಡುವುದಿಲ್ಲ. ಅಷ್ಟಕ್ಕೂ, ರಾಜ್ಯದ ಜನ ಪರಿಶ್ರಮದಿಂದ ಏಳಿಗೆ ಹೊಂದಿದ್ದಾರೆ. ಹಾಗಾಗಿ, ಬಿಜೆಪಿಯವರು ಕರ್ನಾಟಕವನ್ನು ಹಗುರವಾಗಿ ತಿಳಿಯಬಾರದು ಎಂದು ಹೇಳಿದರು.

ಕರ್ನಾಟಕ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ನಾಲ್ಕು ವರ್ಷಗಳ ನಂತರ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಪಿಎಂ ಮೋದಿ ರಾಜ್ಯದಲ್ಲಿ ಸಂಪೂರ್ಣ ಸಕ್ರಿಯವಾಗಿರುವ ಸಮಯದಲ್ಲಿ ಮತ್ತು ರೋಡ್ ಶೋಗಳಿಂದ ಹಿಡಿದು ರ್ಯಾಲಿಗಳನ್ನು ನಡೆಸುತ್ತಿರುವ ಸಮಯದಲ್ಲಿ ಈ ರ್ಯಾಲಿ ನಡೆದಿದೆ. ಇನ್ನು ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗೆ ಇನ್ನು ಮೂರು ದಿನಗಳು ಮಾತ್ರ ಬಾಕಿ ಉಳಿದಿದ್ದು, ಸೋಮವಾರದಂದು ಚುನಾವಣಾ ಪ್ರಚಾರ ಮುಗಿಯುವ ಮುನ್ನವೇ ಮತದಾರರನ್ನು ಓಲೈಸುವ ಕೊನೆಯ ಪ್ರಯತ್ನವಾಗಿ ಪಕ್ಷಗಳು ಚುನಾವಣಾ ಪ್ರಚಾರವನ್ನು ಚುರುಕುಗೊಳಿಸಿವೆ.

Vote for Congress to get rid of BJP