ಚಿಕ್ಕಮಗಳೂರು :  ಬಿಜೆಪಿ ಕಪಿಮುಷ್ಠಿಯಲ್ಲಿ ಮಾಜಿ ಶಾಸಕರ ಹಿಡಿತದಲ್ಲಿದ್ದ ಅಲಂಪುರ ಗ್ರಾಮ ಹಂತ ಹಂತವಾಗಿ ಮುಂದೆ ಬಂದಿದ್ದು ಬಡವರ, ದೀನದಲಿತರ, ಅಲ್ಪಸಂಖ್ಯಾತರ, ಹಿಂದುಳಿದ ವರ್ಗದವರ ಬದುಕಿನ ಬಗ್ಗೆ ಚಿಂತನೆ ಮಾಡುವ ಸರ್ಕಾರ ಬರಬೇಕೆಂದು ತೀರ್ಮಾನಿಸಿರುವುದರಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ನೀಡಬೇಕೆಂದು ಶಾಸಕ ಮನವಿ ಮಾಡಿದರು.

ಅವರು ಇಂದು ಇಂದಾವರ, ದಾಸರಹಳ್ಳಿ, ಮಲ್ಲೇನಹಳ್ಳಿ, ತೋಗರಿಹಂಕಲ್, ಅಲ್ಲಂಪುರ ಗ್ರಾ.ಪಂ ವ್ಯಾಪ್ತಿಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಪರ ಮತ ಯಾಚನೆ ಮಾಡಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ರಾಜ್ಯದಲ್ಲಿ ಬದಲಾವಣೆ ತಂದು ಜನಪರ, ಬಡವರ ಪರ ಇರುವಂತ ಜನ ಬದುಕಿನ ಬಗ್ಗೆ ಚಿಂತನೆ ಮಾಡುವ ಸರ್ಕಾರ ಬರಬೇಕೆಂಬ ಉದ್ದೇಶದಿಂದ ಕಾಂಗ್ರೆಸ್ ಅಭ್ಯರ್ಥಿಯಾದ ನನ್ನನ್ನು ಬೆಂಬಲಿಸಿ ಆಶೀರ್ವದಿಸಿದ್ದೀರೆಂದು ಹೇಳಿದರು.

ಆ ಸಂದರ್ಭದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಘೋ?ಣೆ ಮಾಡಿದ್ದು ಅನು?ನಕ್ಕೆ ತಂದು ನುಡಿದಂತೆ ನಡೆದ ಸರ್ಕಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಆದರೆ ಕಳೆದ ೧೦ ವ?ಗಳಿಂದ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ೨ ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದು ಸುಳ್ಳು ಹೇಳುತ್ತಿರುವುದನ್ನು ಖಂಡಿಸಿದರು.
ಭಾವನೆಗಳನ್ನು ಕೆರಳಿಸಿ ಮತ ಪಡೆಯುವ ಬಿಜೆಪಿ ಜನಪರ ಬದುಕಿನ ಬಗ್ಗೆ ಚಿಂತನೆ ಮಾಡುವುದಿಲ್ಲ. ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳ ಮಾದರಿಯಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವ ಸರ್ಕಾರ ಅಧಿಕಾರಕ್ಕೆ ಬಂದರೆ ಪ್ರತಿ ಬಡ ಕುಟುಂಬದ ಮಹಿಳೆಗೆ ೧ ಲಕ್ಷ ರೂಗಳನ್ನು ಅವರ ಖಾತೆಗೆ ಹಾಕುವುದಾಗಿ ಭರವಸೆ ನೀಡಿದೆ ಎಂದರು.

ಯುವ ನ್ಯಾಯ, ರೈತ ನ್ಯಾಯ, ಶ್ರಮಿಕ ನ್ಯಾಯ, ಪಾಲುದಾರಿಕೆ ನ್ಯಾಯ ಎಂಬ ೫ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದು ಅದರಿಂದ ಈ ಬಾರಿಯ ಏಪ್ರಿಲ್ ೨೬ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅವರನ್ನು ಬೆಂಬಲಿಸಿ ಮತ ನೀಡಬೇಕೆಂದು ವಿನಂತಿಸಿದರು.

ಸಾಮಾಜಿಕ-ಆರ್ಥಿಕವಾಗಿ ಸಂವಿಧಾನದ ಆಶಯದಂತೆ ಸಮ ಸಮಾಜ ನಿರ್ಮಾಣ ಮಾಡಲು ಕಾಂಗ್ರೆಸ್ ಬದ್ಧವಾಗಿದೆ ಎಂದ ಅವರು ಬಿಜೆಪಿ ಸರ್ಕಾರದಲ್ಲಿ ೪೧೦ ರೂ ನಿಂದ ೯೬೦ ರೂ ವರೆಗೆ ಗ್ಯಾಸ್‌ಬೆಲೆ, ಪೆಟ್ರೋಲ್, ಡೀಸೆಲ್ ಬೆಲೆ ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಮಾಡಿದ್ದು ಬಡ ಜನರ ಜೀವನಕ್ಕೆ ಕುಂದುಂಟಾಗಿದೆ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ ಮಂಜೇಗೌಡ ಮಾತನಾಡಿ, ಹಿಂದೆ ಸಂಸದರಾಗಿ ಹಲವು ಜನಪರ ಯೋಜನೆಗಳನ್ನು ತಂದು ಅಭಿವೃದ್ಧಿ ಮಾಡಿದ್ದು, ಈ ಬಾರಿ ಮತ್ತೊಮ್ಮೆ ಸರಳ ಸಜ್ಜನಿಕೆಯ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆಯವರ ಹಸ್ತದ ಗುರುತಿಗೆ ಮತ ನೀಡಬೇಕೆಂದು ವಿನಂತಿಸಿದರು. ಹಾಲಿ ಸಂಸದರಾಗಿ ಕಳೆದ ಹತ್ತು ವ?ಗಳಿಂದ ಇದ್ದ ಕೃಷಿ ಸಚಿವರಾಗಿದ್ದ ಶೋಭಾ ಕರಂದ್ಲಾಜೆ ರೈತರ ಬಗ್ಗೆ ಯಾವುದೇ ಜನಪರ ಯೋಜನೆ ತರಲಿಲ್ಲ. ಆದ್ದರಿಂದ ಸಜ್ಜನಶೀಲ ವ್ಯಕ್ತಿಯಾದ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಬೇಕೆಂದು ಮನವಿ ಮಾಡಿದರು.

ಪ್ರಚಾರ ಸಮಿತಿ ಅಧ್ಯಕ್ಷ ಬೆಟ್ಟಗೆರೆ ಪ್ರವೀಣ್ ಮಾತನಾಡಿ ಕಾಂಗ್ರೆಸ್ ಪಕ್ಷ ಕೊಟ್ಟ ಭರವಸೆಗಳನ್ನು ಸರ್ಕಾರ ಅಧಿಕಾರಕ್ಕೆ ಬಂದ ೬ ತಿಂಗಳಲ್ಲಿ ಅನುಷ್ಠಾನ ಮಾಡಿ ಜಾರಿಗೆ ತರಲಾಗಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಮತ ನೀಡಿ ಗೆಲ್ಲಿಸಿದರೆ ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದರೆ ಜನಪರ ಯೋಜನೆಗಳನ್ನು ಜಾರಿ ಮಾಡುತ್ತಾರೆಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಕೆ.ಮಹಮ್ಮದ್, ಅನಿಲ್‌ಕುಮಾರ್,ಶಂಕರ್, ಕುಮಾರ್, ಸೋಮಶೇಖರ್, ಗೋಪಿ, ಜಯರಾಜ್ ಅರಸು, ನಾಗಭೂಷಣ್, ಹಾಲೇಶ್, ಕುಮಾರ, ರಘು, ಸೋಮಶೆಟ್ಟಿ, ಶಂಕರ್, ರವಿ ಇದ್ದರು.

Vote for the Congress party which cares about the lives of poor people