ಚಿಕ್ಕಮಗಳೂರು: ಸಂವಿಧಾನವು ನಾಗರೀಕರಿಗೆ ಹಕ್ಕುಗಳನ್ನು ನೀಡುವುದರ ಜೊತೆಗೆ ಕರ್ತವ್ಯಗಳನ್ನು ನೀಡಿದೆ. ಹೀಗಾಗಿ ಪ್ರತಿಯೊಬ್ಬ ನಾಗರೀಕರು ತಮ್ಮ ಜವಾಬ್ದಾರಿ ಅರಿತು ನಡೆಯಬೇಕು ಎಂದು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಂ.ಶಾಂತಣ್ಣ ಆಳ್ವ ಹೇಳಿದರು.

ನಗರದ ಜಿಲ್ಲಾ ಕಾರಾಗೃಹದಲ್ಲಿ ರಾಜ್ಯ ಮಾನವ ಹಕ್ಕುಗಳ ಆಯೋಗ, ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ವಕೀಲರ ಸಂಘ ಮತ್ತು ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಸಹಯೋಗದಲ್ಲಿ ಭಾನುವಾರ ನಡೆದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮತ್ತೊಬ್ಬರ ಸ್ವಾತಂತ್ರ್ಯವನ್ನು ಗೌರವಿಸಿ ಬದುಕುವುದೇ ಮಾನವ ಹಕ್ಕುಗಳನ್ನು ಪಾಲನೆ ಮಾಡಿದಂತೆ, ಪ್ರತಿಯೊಬ್ಬ ಪ್ರಜೆಯೂ ಸ್ವತಂತ್ರ್ಯವಾಗಿ ಜೀವಿಸುವ ಹಕ್ಕನ್ನು ಪಡೆದಿದ್ದು ಅವುಗಳ ರಕ್ಷಣೆ ಮಾಡುವ ಕಾರಣಕ್ಕಾಗಿ ಡಿ.೧೦ ರಂದು ವಿಶ್ವ ಮಾನವ ಹಕ್ಕುಗಳ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದರು.

ಮಾನವ ಹಕ್ಕುಗಳ ರಕ್ಷಣೆ ಮತ್ತು ಪ್ರಚಾರಕ್ಕಾಗಿ ದಿನವಾದ ಇಂದು ವ್ಯಕ್ತಿಯ ಜೀವನ, ಸ್ವಾತಂತ್ರ್ಯ, ಸಮಾನತೆ ಮತ್ತು ಘನತೆಗೆ ಸಂಬಂಧಿಸಿದ ಹಕ್ಕುಗಳ ಬಗೆಗೆ ಜನರಲ್ಲಿ ಅರಿವು ಮೂಡಿಸಲಾಗುತ್ತದೆ. ಜೀವಿಸುವುದು, ವಾಕ್ ಸ್ವಾತಂತ್ರ್ಯ, ಆಹಾರ, ಶಿಕ್ಷಣ, ಸಾಮಾಜಿಕ ಭದ್ರತೆ, ಸಂಘಟನೆ, ಧಾರ್ಮಿಕ ಸ್ವಾತಂತ್ರ್ಯದ ಜೊತೆಗೆ ದೌರ್ಜನ್ಯದ ವಿರು ದ್ಧ ಧನಿ ಎತ್ತುವ ಹಕ್ಕುಗಳು ಮಾನವ ಹಕ್ಕುಗಳ ವ್ಯಾಪ್ತಿಯಲ್ಲಿ ಬರಲಿದೆ ಎಂದರು.

ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಮಾತನಾಡಿ ಮಾನವ ಹಕ್ಕುಗಳ ದಿನದ ಘೋ?ವಾಕ್ಯ ಸಮಾ ನತೆಗೆ ಸಂಬಂಧಿಸಿದ್ದಾಗಿದೆ. ದೇಶದಲ್ಲಿ ಅಸಮಾನತೆ ಕಡಿಮೆ ಮಾಡುವುದು, ಮಾನವ ಹಕ್ಕುಗಳನ್ನು ಮುನ್ನಡೆ ಸುವುದು. ಹಾಗೂ ದೇಶದ ಅಭಿವೃದ್ಧಿಗೆ ಮಾನವ ಹಕ್ಕುಗಳು ಉತ್ತಮ ಮಾರ್ಗ ಎನ್ನುವುದನ್ನು ಕೇಂದ್ರೀಕರಿಸುತ್ತದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಮಾನವ ಹಕ್ಕುಗಳ ಸಮಿತಿ ಅಧ್ಯಕ್ಷ ಹೆಚ್.ಸಿ.ನಟ ರಾಜ್ ದೂಡುಕು ನಿರ್ಧಾರದಿಂದ ಕೆಲವರು ಅಪರಾಧಿಗಳಾಗಿ ಬಂಧಿಯಾಗುತ್ತಾರೆ. ಸೆರೆವಾಸದಲ್ಲಿ ಅನುಭವಿಸಿದ ಶಿಕ್ಷೆ ಪಶ್ಚಾತ್ತಾಪವೆಂದು ತಿಳಿದು ಮನಪರಿವರ್ತನೆಗೊಳ್ಳಬೇಕು. ಮುಂದಿನ ಜೀವನದಲ್ಲಿ ಮಾನವ ಹಕ್ಕುಗಳ ಅರಿವು ಹೊಂದಿ ಜೀವನದಲ್ಲಿ ಅಳವಡಿಸಿಕೊಂಡು ಮುನ್ನೆಡೆದರೆ ಸಾತ್ವಿಕ ಬದುಕು ನಿಮ್ಮದಾಗಲಿದೆ ಎಂದರು.

ಇದೇ ವೇಳೆ ಕಾನೂನು ಪ್ರಾಧಿಕಾರದ ಸಹಾಯಕ ಮುಖ್ಯ ಅಭಿರಕ್ಷಕ ಡಿ.ನಟರಾಜ್ ಉಪನ್ಯಾಸ ನೀಡಿದರು. ಜಿಲ್ಲಾ ಮಾನವ ಹಕ್ಕು ಸಮಿತಿಯ ಪತ್ರಕರ್ತ ನಿರ್ದೇಶಕ ಬಿ.ತಿಪ್ಪೇರುದ್ರಪ್ಪ ಮಾತನಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ.ವಿಕ್ರಂ ಅಮಟೆ, ಜಿ.ಪಂ. ಮುಖ್ಯ ಕಾರ್ಯನಿರ್ವ ಹಣಾಧಿಕಾರಿ ಡಾ.ಗೋಪಾಲಕೃಷ್ಣ, ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ.ಎಸ್.ಸೋಮ, ಕಾರಾಗೃಹ ಅಧೀಕ್ಷಕ ಎಸ್.ಎಸ್.ಮೇಟಿ, ಜಿಲ್ಲಾ ಮಾನವ ಹಕ್ಕು ಸಮಿತಿ ಪದಾಧಿಕಾರಿಗಳಾದ ಬನಶಂಕರಿ ಜೋಷಿ, ಪ್ರಭು, ಕೆ.ಆರ್.ಜಗದೀಶ್, ಕೆ.ಸಿ.ಕೃಷ್ಣಯ್ಯಗೌಡ, ಸ್ವರ್ಣಗೌರಿ, ಹೆಚ್.ಜೆ.ಪರಮೇಶ್ವರ, ಶೈಲಬಸವರಾಜು, ಚಂದ್ರ ಮತಿ, ಸುಶೀಲಮ್ಮ, ಪರಮೇಶ್ವರಪ್ಪ ಮತ್ತಿತರರು ಉಪಸ್ಥಿತರಿದ್ದರು.

World Human Rights Day Programme